ಮಂಗಳೂರು: ಜಪಾನ್ ಮಂಗ ಸೇರಿದಂತೆ ನಾಲ್ವರು ಕುಖ್ಯಾತ ಕ್ರಿಮಿನಲ್ಸ್ ಅರೆಸ್ಟ್


ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರಾಜಾ ಅಲಿಯಾಸ್ ಜಪಾನ್ ಮಂಗ ಸೇರಿದಂತೆ ನಾಲ್ವರು ಕುಖ್ಯಾತ ಕಿಮಿನಲ್ಸ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗ್ರೆ ನಿವಾಸಿ ಕಬೀರ್(30), ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು 8ನೇ ನಿವಾಸಿ ನಿಸಾರ್ ಹುಸೇನ್, ಕಣ್ಣೂರು ಪಡೀಲ್ ನಿವಾಸಿ ಪ್ರಕಾಶ್ ಶೆಟ್ಟಿ, ಕುಂಜತ್ತಬೈಲ್ ದೇವಿನಗರ ನಿವಾಸಿ ರಾಜಾ ಅಲಿಯಾಸ್ ಜಪಾನ್ ಮಂಗ ಬಂಧಿತ ಆರೋಪಿಗಳು.

ರಾಜಾ ಅಲಿಯಾಸ್ ಜಪಾನ್ ಮಂಗನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಆ ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರ ಕೈಗೂ ಸಿಗದೆ 2017ರಿಂದ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ದ.ಕ.ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಆರೋಪಿ ಕಬೀರ್ ವಿರುದ್ಧ 8ಪ್ರಕರಣಗಳಲ್ಲಿ ಜಾಮೀನು ರಹಿತ ವಾರೆಂಟ್ ಇತ್ತು. ದಾಖಲಾಗಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಿಸಾರ್ ಹುಸೈನ್ ವಿರುದ್ಧ ದ.ಕ.ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ.‌ ಆದ್ದರಿಂದ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಆದ್ದರಿಂದ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಪ್ರಕಾಶ್ ಶೆಟ್ಟಿ ಎಂಬಾತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಈತನ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿತ್ತು. ಆದ್ದರಿಂದ ಪೊಲೀಸರು ಪ್ರಕಾಶ್ ಶೆಟ್ಟಿಯನ್ನು ಬಂಧಿಸಿದ್ದಾರೆ.