Puttur:-ಎನ್ಐಎ ಅಧಿಕಾರಿಗಳು ಸಂಚರಿಸುತ್ತಿದ್ದ ವಾಹನ ಬೈಕ್‌ಗೆ ಡಿಕ್ಕಿ.ಒರ್ವ ಸಾವು.

ಪುತ್ತೂರು

ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, ಬಿಹಾರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ತನಿಖೆಯಲ್ಲಿ ನಿರತರಾಗಿರುವ ಎನ್‌ಐಎ ತಂಡ ಪುತ್ತೂರು,ಸುಳ್ಯ, ಬಂಟ್ವಾಳ ಕಡೆಗಳಲ್ಲಿ ತಿರುಗಾಟ ನಡೆಸುತ್ತಿದೆ ಎನ್ನಲಾಗಿದೆ. ಈ ವೇಳೆ ಅಪಘಾತ ನಡೆದಿದೆ. ಮಾಣಿ - ಮೈಸೂರು ಹೆದ್ದಾರಿಯ ಸಂಪ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.
ಬೈಕಿನಲ್ಲಿ ತೆರಳುತ್ತಿದ್ದ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್ ಆಗಿರುವ ಲಕ್ಷಣ ನಾಯ್ಕ ಬಿ. (50) ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೊಳಗಾದ ಪೊಲೀಸ್ ವಾಹನವು ದಕ್ಷಿಣ ಕನ್ನಡ ಜಿಲ್ಲೆಯ ಡಿಆರ್‌ ವಿಭಾಗಕ್ಕೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಲಕ್ಷಣ್ ನಾಯ್ಕ ಅವರು ಬೈಕಿನಲ್ಲಿ ಪುತ್ತೂರಿನಿಂದ ಆರ್ಲಪದವು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.