-->
ಲವ್ ಬ್ರೇಕ್ಅಪ್ ಗೆ ಒಪ್ಪದ ಪ್ರಿಯಕರನ ವಿಷವಿಕ್ಕಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಪ್ರೇಯಸಿಯಿಂದ ಲೈಂಗಿಕ ಕ್ರಿಯೆದ್ದೇ ಉಲ್ಲೇಖ

ಲವ್ ಬ್ರೇಕ್ಅಪ್ ಗೆ ಒಪ್ಪದ ಪ್ರಿಯಕರನ ವಿಷವಿಕ್ಕಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಪ್ರೇಯಸಿಯಿಂದ ಲೈಂಗಿಕ ಕ್ರಿಯೆದ್ದೇ ಉಲ್ಲೇಖ


ತಿರುವನಂತಪುರ: ಲವ್ ಬ್ರೇಕಪ್ ಗೆ ಒಲ್ಲದ ಬಾಯ್‌ಫ್ರೆಂಡ್‌ಗೆ ಪ್ರೇಯಸಿಯೇ ವಿಷ ನೀಡಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸಂಗತಿಗಳು ಬಯಲಾಗಿವೆ.

ಪ್ರಿಯಕರ ಶರೋನ್ ರಾಜ್ ತನ್ನೊಂದಿಗೆ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಲವ್ ಬ್ರೇಕ್ಅಪ್ ಗ್ ಒಪ್ಪಿಲ್ಲ. ಆದ್ದರಿಂದ 2022ರ ಅಕ್ಟೋಬರ್ 14 ರಂದು ವಿಷ ಬೆರೆಸಿದ ಔಷಧ ನೀಡಿದ್ದೇನೆ. ಅದೇ ದಿನ ಬೆಳಗ್ಗೆ ಮತ್ತೆ ಲೈಂಗಿಕ ಕ್ರಿಯೆ ನಡೆಸಲು ಮನೆಗೆ ಬರುವಂತೆ ಬಲವಂತ ಮಾಡಿದ್ದಾನೆ ಎಂದು ಕೊಲೆ ಆರೋಪಿ ಗ್ರೀಷ್ಮಾ ಹೇಳಿಕೆ ನೀಡಿದ್ದಾಳೆ. 

ಸಾಯುವ ಕೊನೆಯ ಕ್ಷಣದಲ್ಲಿ ಐಸಿಯು ಬೆಡ್‌ನಲ್ಲಿದ್ದ ಶರೋನ್ ರಾಜ್, ತನಗೆ ಪ್ರೇಯಸಿ ಗ್ರೀಷ್ಮಾ ವಿಷ ನೀಡಿ ವಂಚನೆ ಮಾಡಿದ್ದಾಳೆ ಎಂದು ಸಂಬಂಧಿಕರಿಗೆ ಹೇಳಿದ್ದಾನೆ. ಈ ಎಲ್ಲ ಅಂಶಗಳನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ್ದು, ನೆಯ್ಯಟಿಂಕರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.


2022ರ ಅಕ್ಟೋಬರ್ 13ರಂದು ಇಬ್ಬರು 1 ಗಂಟೆ 7 ನಿಮಿಷಗಳ ಕಾಲ ಸೆಕ್ಸ್ ಬಗ್ಗೆ ಮಾತನಾಡಿದ್ದಾರೆ. ಸೆಕ್ಸ್ ಗಾಗಿ ಒತ್ತಾಯ ಮಾಡುತ್ತಿದ್ದರಿಂದ ಅಕ್ಟೋಬರ್ 14ರಂದು ತಾನು ಗ್ರೀಷ್ಮಾ ಮನೆಗೆ ಹೋದೆ ಎಂದು ಶರೋನ್ ರಾಜ್ ತನ್ನ ಸಂಬಂಧಿಕರ ಮುಂದೆ ಹೇಳಿಕೊಂಡಿದ್ದಾನೆ. 

ಆಯುರ್ವೇದಿಕ್ ಔಷಧದಲ್ಲಿ ವಿಷ ಬೆರೆಸಿ ನೀಡಿ ಕೊಲೆ ಮಾಡಿದ್ದಾಳೆ. ಬಳಿಕ ಆತನೊಂದಿಗೆ ನಡೆಸಿದ್ದ ಚಾಟ್ ಅನ್ನು ಗ್ರೀಷ್ಮಾ ಡಿಲೀಟ್ ಮಾಡಿದ್ದಾಳೆ. ಅಳಿಸಿದ ಸಂದೇಶಗಳನ್ನು ಹಿಂಪಡೆಯಬಹುದೇ ಎಂದು ನೋಡಲು ಅವಳು ಹಲವಾರು ಬಾರಿ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿ ಹುಡುಕಾಡಿದ್ದಾಳೆ.

ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ತನಿಖೆ ನಡೆಸಿದಾಗ ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ಅ.31ರಂದು ಗ್ರೀಷ್ಮಾ ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. 

ಅ.14ರಂದು ಶರೋನ್ ರಾಜ್‌ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟಿದ್ದಾನೆ. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.


ಗ್ರೀಷ್ಮಾಗೆ 2022ರ ಮಾರ್ಚ್ 4ರಂದು ಯೋಧನೊಬ್ಬನೊಂದಿಗೆ ನಿಶ್ಚಿತಾರ್ಥ ನಡೆದಿತ್ತು. ಆ ಬಳಿಕ ಶರೋನ್ ರಾಜ್ ನೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೋನ್ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ. ಬಳಿಕ ನವೆಂಬರ್‌ನಲ್ಲಿ ಶರೋನ್ ಮನೆಯಲ್ಲಿ ಆ ಬಳಿಕ ವೆಟ್ಟುಕಾಡ್ ಚರ್ಚ್‌ನಲ್ಲಿ ಇಬ್ಬರೂ ವಿವಾಹವಾಗಿದ್ದರು. 

ಇದಾದ ಬಳಿಕ ಥಿಪ್ಪರಪುವಿನಲ್ಲಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದ್ದರು. ಆದರೆ ಯೋಧನೊಂದಿಗಿನ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೋನ್ ನಿಂದ ದೂರವಾಗಲು ಗ್ರೀಷ್ಮಾ ಬಯಸಿದ್ದಳು. ಲವ್ ಬ್ರೇಕಪ್ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದ್ದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. 

ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್‌ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article