-->
ಮಂಗಳೂರು: ರೈಲು ಬೋಗಿಯೊಳಗಡೆ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ರೈಲು ಬೋಗಿಯೊಳಗಡೆ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ


ಮಂಗಳೂರು: ನಗರದ ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ರವಿವಾರ ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದಾರೆ. ಕುತ್ತಿಗೆಯಲ್ಲಿ ಮಣಿ ಸರವಿದೆ. 

ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article