ವಾರಣಾಸಿ: ಭೋಜ್‌ಪುರಿ ನಟಿ ಹಾಗೂ ರೂಪದರ್ಶಿಯಾಗಿರುವ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವಾರಣಾಸಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
25ರ ಹರೆಯದ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯೆಂದು ಕಂಡುಬರುತ್ತಿದೆ. ವರದಿ ಬಂದ ಬಳಿಕ ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಬಹುದು ಎಂದೂ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.