ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ, ಕನಕಪುರದಿಂದ ಡಿ.ಕೆ.ಶಿ. ಸ್ಪರ್ಧೆ


ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಶಂಖಧ್ವನಿ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಯುಗಾದಿ ಹಬ್ಬ ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಯುಗಾದಿಯ ದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿತ್ತು.

ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ. ದ.ಕ.ಜಿಲ್ಲೆಯಲ್ಲಿ ಐದು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಮೊದಲ ಪಟ್ಟಿಯಲ್ಲಿದೆ. ಬಂಟ್ವಾಳ ರಮಾನಾಥ ರೈ, ಮಂಗಳೂರು ಯು.ಟಿ.ಖಾದರ್, ಬೆಳ್ತಂಗಡಿ ರಕ್ಷಿತ್ ರಾಮಯ್ಯ, ಮೂಡುಬಿದಿರೆ ಮಿಥುನ್ ರೈ, ಸುಳ್ಯ ಕೃಷ್ಣಪ್ಪರ ಹೆಸರು ಮೊದಲ ಪಟ್ಟಿಯಲ್ಲಿದೆ.



BREAKING NEWS
Loading latest news...
Join our WhatsApp Channel Powered By : Online Pudu