ಇಂದು ಸಂಜೆ ಬಿಜೆಪಿಯ 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಘೋಷಣೆ- ಬಿ ಎಸ್ ವೈ


ಹೊಸದಿಲ್ಲಿ:  ಕರ್ನಾಟಕ ವಿಧಾನಸಭಾ ಚುನಾವಣೆಗೆ  ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡುತ್ತದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.



ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ


ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ನಡೆಯಲಿದೆ. ಪಟ್ಟಿಯನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ