-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಮನಿಸಿ- ಮಂಗಳೂರಿನಲ್ಲಿ 2 ದಿನ ನೀರು ಇಲ್ಲ !

ಗಮನಿಸಿ- ಮಂಗಳೂರಿನಲ್ಲಿ 2 ದಿನ ನೀರು ಇಲ್ಲ !


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ HLPS- 2 -80MLD ತುಂಬೆ ರೇಚಕ ಸ್ಥಾವರದಲ್ಲಿರುವ 1200 ಎಂ.ಎಂ ವ್ಯಾಸದ ಕೊಳವೆ ದುರಸ್ಥಿ ಕಾಮಗಾರಿ ನಡೆಯಲಿದೆ. LLPS-1 ರಲ್ಲಿ ಪಂಪು ನಂಬ್ರ: 2 ಹೆಡರ್ ಬದಲಾವಣೆ ಕಾಮಗಾರಿ ಹಾಗೂ ಇತರ ಪೂರಕ ಕಾಮಗಾರಿಗಳ ನಿರ್ವಹಿಸಲು ಇರುವುದರಿಂದ  27-04-2023 ಗುರುವಾರ ಬೆಳಿಗ್ಗೆ ಗಂಟೆ 6.00 ರಿಂದ 29-04-2023 ಶನಿವಾರ ಬೆಳಗ್ಗೆ 6.00 ಗಂಟೆಯವರೆಗೆ 48 ಗಂಟೆ ಅವಧಿಯಲ್ಲಿ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು  ಮಂಗಳೂರು ಮಹಾನಗರಪಾಲಿಕೆ ಪ್ರಕಟನೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article