-->
1000938341
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಹೊರತು ಪಡಿಸಿ ಹಾಲಿ BJP ಶಾಸಕರಿಗೆ ಟಿಕೆಟ್? - ಉಮನಾಥ ಕೋಟ್ಯಾನ್, ಅಂಗಾರ ಸೇಫ್ ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಹೊರತು ಪಡಿಸಿ ಹಾಲಿ BJP ಶಾಸಕರಿಗೆ ಟಿಕೆಟ್? - ಉಮನಾಥ ಕೋಟ್ಯಾನ್, ಅಂಗಾರ ಸೇಫ್ ?


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಳು ಹತ್ತಿರಬರುತ್ತಿದ್ದರೂ ಆಡಳಿತ ಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ  ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ದಿನಕ್ಕೊಂದು ವಿಚಾರಗಳು ತಿರುವು ಪಡೆಯುತ್ತಿದೆ.

ಈ ಬಾರಿ ಬಿಜೆಪಿ ಟಿಕೆಟ್ ನೀಡುವಾಗ ಹೊಸ ಪ್ರಯೋಗ ಮಾಡಲು ಬಿಜೆಪಿ ನಿರ್ಧರಿಸಿತ್ತು.  ಕೆಲ ಹಾಲಿ ಶಾಸಕರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿತ್ತು. ಅದರಂತೆ ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಅಂಗಾರ, ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ಅವರನ್ನು ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. 

ಆದರೆ ಹಾಲಿ ಶಾಸಕರನ್ನು ಬದಲಾವಣೆ ಮಾಡಿದರೆ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಟವಾಗಬಹುದು ಎಂಬ ಭೀತಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹಾಲಿ ಶಾಸಕರನ್ನು ಬದಲಾವಣೆ ಮಾಡುವ ನಿರ್ಧಾರದ ಬಗ್ಗೆ ಬಿಜೆಪಿ ಹೈಕಮಾಂಡ್ ಪುನರ್ ಅವಲೋಕನ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತೂಗುಯ್ಯಾಲೆಯಲ್ಲಿದ್ದ ಮೂವರು ಶಾಸಕರಲ್ಲಿ ಇಬ್ಬರು ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ಟಿಕೆಟ್ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸುಳ್ಯ ಕ್ಷೇತ್ರದ ಶಾಸಕ ಅಂಗಾರ, ಮೂಡಬಿದಿರೆ ಕ್ಷೇತ್ರದ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಇನ್ನೂ ಕಾರ್ಯಕರ್ತರ ತೀವ್ರ ಆಕ್ರೋಶವಿರುವ ಕಾರಣಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಮಾತ್ರ ಕೊಕ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಇಂದು ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಆಗಲಿದ್ದು, ಈ ಪಟ್ಟಿ ಬಿಡುಗಡೆ ಬಳಿಕವಷ್ಟೆ ಹೈಕಮಾಂಡ್ ನಿರ್ಧಾರ ದ ಬಗ್ಗೆ ನೈಜಾಂಶ ಬೆಳಕಿಗೆ ಬರಲಿದೆ.

Ads on article

Advertise in articles 1

advertising articles 2

Advertise under the article