-->
1000938341
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಐವರು ಹಾಲಿ ಶಾಸಕರಿಗೆ ಮಣೆ - ಖಾದರ್ ಎದುರು ಸತೀಶ್ ಕುಂಪಲ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಐವರು ಹಾಲಿ ಶಾಸಕರಿಗೆ ಮಣೆ - ಖಾದರ್ ಎದುರು ಸತೀಶ್ ಕುಂಪಲ


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಬಲ ಪೈಪೋಟಿ ಎದುರಿಸುತ್ತಿರುವ ಬಿಜೆಪಿ ಮಂಗಳವಾರ ರಾತ್ರಿ ತನ್ನ ಚುನಾವಣಾ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ‌. ಪ್ರಥಮ ಪಟ್ಟಿಯಲ್ಲಿ ದ.ಕ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ ದ.ಕ.ಜಿಲ್ಲೆಯಲ್ಲಿ ಐವರು ಹಾಲಿ ಶಾಸಕರಿಗೆ ಬಿಜೆಪಿ ಮಣೆ ನೀಡಿದೆ.

ಹೌದು... ಮಂಗಳೂರು ಉತ್ತರಕ್ಕೆ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್, ಮುಲ್ಕಿ - ಮೂಡುಬಿದಿರೆ ಕ್ಷೇತ್ರಕ್ಕೆ ಉಮಾನಾಥ ಕೋಟ್ಯಾನ್, ಬಂಟ್ವಾಳ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಅವರಿಗೆ ನೀಡಲಾಗಿದೆ. ಈಗಾಗಲೇ ಈ ಐವರೂ ಇದೇ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದರು. ಮತ್ತೆ ಅವರಿಗೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. 

ಆದರೆ ಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖ ಸತೀಶ್ ಕುಂಪಲ ಅವರಿಗೆ ಟಿಕೆಟ್ ದೊರಕಿದೆ. ಕಳೆದ ಬಾರಿ ಸಂತೋಷ್ ರೈ ಬೋಳಿಯಾರು ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿದು ಸೋತಿದ್ದರು. ಈ ಬಾರಿ ಸಂತೋಷ್ ರೈ ಅವರ ಬದಲು ಬಿಜೆಪಿ ಸತೀಶ್ ಕುಂಪಲ ಅವರಿಗೆ ಮಣೆ ಹಾಕಿದೆ.

ಸತೀಶ್ ಕುಂಪಲವೇದವ್ಯಾಸ ಕಾಮತ್
ಉಮನಾಥ ಕೋಟ್ಯಾನ್


ಭರತ್ ಶೆಟ್ಟಿ

ಹರೀಶ್ ಪೂಂಜಾ


ರಾಜೇಶ್ ನಾಯ್ಕ್


Ads on article

Advertise in articles 1

advertising articles 2

Advertise under the article