ಹಾಲಾಡಿ ಅವರ ಆ ನಿರ್ಧಾರವೆ ರಘುಪತಿ ಭಟ್ ಗೆ BJP ಟಿಕೆಟ್ ತಪ್ಪಲು ಕಾರಣ?


ಉಡುಪಿ: ಬಿಜೆಪಿ ಟಿಕೆಟ್ ಘೋಷಣೆಯಾದ ಬಳಿಕ ಉಡುಪಿಯಲ್ಲಿ ರಘುಪತಿ ಭಟ್ ಅವರಿಗೆ ಟಿಕೆಟ್ ಕೈ ತಪ್ಪಿರುವುದು ಬಾರಿ ಚರ್ಚೆಗೆ ಕಾರಣವಾಗಿದೆ.

ರಘುಪತಿ ಭಟ್ ಅವರು ಈ ಬಾರಿ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಸಾಕಷ್ಟು ತಯಾರಿಯನ್ನು ನಡೆಸಿದ್ದರು. ಆದರೆ ಹೈಕಮಾಂಡ್ ರಘುಪತಿ ಭಟ್ ಅವರಿಗೆ ಟಿಕೆಟ್ ನಿರಾಕರಿಸಿ ಶಾಕ್ ನೀಡಿದೆ.

ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಲು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ  ನಿರ್ಧಾರವೊಂದು ಕಾರಣ ಎಂದು ಹೇಳಲಾಗುತ್ತಿದೆ.

ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಇತ್ತೀಚೆಗೆ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿದ್ದರು. ಇದರಿಂದಾಗಿ ಅವರ ಕ್ಷೇತ್ರದಲ್ಲಿ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಅಭ್ಯರ್ಥಿ ಯನ್ನು ಆಯ್ಕೆ ಮಾಡಲಾಗಿದೆ. ಕಿರಣ್ ಕುಮಾರ್ ಕೊಡ್ಗಿ ಅವರು ಬ್ರಾಹ್ಮಣ ಸಮುದಾಯದವರು. ಈಗಾಗಲೇ ‌ಉಡುಪಿಯಲ್ಲಿ ರಘುಪತಿ ಭಟ್ ಅವರಿಗೆ ಟಿಕೆಟ್ ‌ನೀಡಲಾಗುತ್ತಿದೆ.ಅವರು ಬ್ರಾಹ್ಮಣರು. ಜಿಲ್ಲೆಯಲ್ಲಿ ಎರಡು ಮಂದಿ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿ ರಘುಪತಿ ಭಟ್ ಅವರಿಗೆ ಟಿಕೆಟ್ ನಿರಾಕರಿಸಿದೆ.

ಇನ್ನೂ ಕುಂದಾಪುರದಲ್ಲಿ ಬಂಟ ಸಮುದಾಯದ ಪ್ರಾತಿನಿಧ್ಯ ಇಲ್ಲದೆ ಇರುವುದರಿಂದ ‌ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಗೆ  ಟಿಕೆಟ್ ನೀಡಿ ಬಂಟ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದೆ. ಕಾಪುವಿನಲ್ಲಿ ತಪ್ಪಿದ ಮೊಗವೀರ ಸಮುದಾಯದ ಪ್ರಾತಿನಿಧ್ಯ ವನ್ನು ಉಡುಪಿ ಯಲ್ಲಿ ನೀಡಲಾಗಿದೆ.