ಸೋಮವಾರ ( ಎ.10) ಶೃಂಗೇರಿ, ಧರ್ಮಸ್ಥಳಕ್ಕೆ ಡಿ ಕೆ ಶಿವಕುಮಾರ್

 
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ( D K Shivakumar) ಅವರು ಸೋಮವಾರ ( ಎ .10)  ಶೃಂಗೇರಿ ( SRINGERI) ಮತ್ತು ಧರ್ಮಸ್ಥಳ ( DHARMASTHALA) ಕ್ಕೆ ಭೇಟಿ ನೀಡಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇನ್ನೂ 48 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲು ಬಾಕಿ ಇದೆ. ಇದರ ಮಧ್ಯೆ ಡಿ ಕೆ ಶಿವಕುಮಾರ್ ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದಾರೆ.

ಸೋಮವಾರ ಬೆಳಿಗ್ಗೆ 8 ಗಂಟೆಗೆ ಹಾಸನದಿಂದ ಹೆಲಿಕಾಪ್ಟರ್ ಮೂಲಕ ಹೊರಟು 8.45 ಕ್ಕೆ ಶೃಂಗೇರಿ ಗೆ ಬರಲಿದ್ದಾರೆ. ಶೃಂಗೇರಿ ಶಾರದಾ ಪೀಠದಲ್ಲಿ ಪೂಜೆ ಸಲ್ಲಿಸಿ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಹೊರಡಲಿದ್ದಾರೆ.  11.45 ಕ್ಕೆ ಧರ್ಮಸ್ಥಳ ತಲುಪಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಲಿದ್ದಾರೆ. 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತೆರಳಲಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu