-->
ಟಿಕೆಟ್ ಘೋಷಣೆಗೆ ಮುನ್ನ ಕೆ ಎಸ್ ಈಶ್ವರಪ್ಪ ಚುನಾವಣಾ ನಿವೃತ್ತಿ ಘೋಷಣೆ

ಟಿಕೆಟ್ ಘೋಷಣೆಗೆ ಮುನ್ನ ಕೆ ಎಸ್ ಈಶ್ವರಪ್ಪ ಚುನಾವಣಾ ನಿವೃತ್ತಿ ಘೋಷಣೆ


ಶಿವಮೊಗ್ಗ: ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸುತ್ತಿದ್ದ ಕೆ ಎಸ್ ಈಶ್ವರಪ್ಪ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುವ ಮುಂಚೆಯೆ ಚುನಾವಣಾ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.

ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

''ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸಿದ ಈಶ್ವರಪ್ಪ ಅವರು  ಏಕಾಏಕಿ ನಿವೃತ್ತಿ ಘೋಷಿಸಿರುವುದು ಕುತೂಹಲ ಕ್ಕೆ ಕಾರಣವಾಗಿದೆ.Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article