ಕೊನೆಗೂ ಜೆ ಆರ್ ಲೋಬೋ ( J R LOBO ) ಗೆ ಟಿಕೆಟ್ ಫೈನಲ್ ?
Friday, April 7, 2023
ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ ಆರ್ ಲೋಬೋ ಗೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಜೆ ಆರ್ ಲೋಬೋ 2013 ರಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 2018 ರಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಎದುರು ಸೋಲು ಕಂಡಿದ್ದರು. ಅವರು ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಈ ಬಾರಿಯೂ ಆಕಾಂಕ್ಷಿಯಾಗಿದ್ದರು.
ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಈ ಬಾರಿ ಹಲವು ಮಂದಿ ಆಕಾಂಕ್ಷಿಗಳಿದ್ದರು. ಅದರಲ್ಲಿ ಜೆ ಆರ್ ಲೋಬೋ, ಐವನ್ ಡಿ ಸೋಜ ಮತ್ತು ಪದ್ಮರಾಜ್ ಹೆಸರು ಮುಂಚೂಣಿಯಲ್ಲಿತ್ತು. ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಐವನ್ ಡಿಸೋಜ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಕಾಂಗ್ರೆಸ್ ಸದಸ್ಯತ್ವ ಪಡೆಯದೆ ಟಿಕೆಟ್ ನಿರೀಕ್ಷೆಯಲ್ಲಿರುವ ಪದ್ಮರಾಜ್ ದೆಹಲಿಯಲ್ಲಿದ್ದುಕೊಂಡೆ ಲಾಭಿ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸದೆ ಇದ್ದರೂ ಮಾಜಿ ಶಾಸಕ ಜೆ ಆರ್ ಲೋಬೋ ಅವರಿಗೆ ಟಿಕೆಟ್ ಅಂತಿಮ ಗೊಳಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.