ಅರುಣ್ ಕುಮಾರ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ- ಕಲ್ಲಡ್ಕ ಪ್ರಭಾಕರ್ ಭಟ್ ಗರಂ ( Video)
Thursday, April 27, 2023
.
ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ ಎಂದು ಪ್ರಶ್ನಿಸಿದರು.
ದೇವಸ್ಥಾನದ ದುಡ್ಡು ಕೊಳ್ಳೆಹೊಡೆದ,ಮಹಿಳೆಗೆ ವಾಹನ ಡಿಕ್ಕಿ ಹೊಡೆದು ಅಲ್ಲೇ ಬಿಟ್ಚು ಹೋಗಿರುವ ಮತ್ತು ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿರುವ ವ್ಯಕ್ತಿ ಅರುಣ್ ಪುತ್ತಿಲ ಅಕ್ರಮ ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅವರಲ್ಲಿ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ. ಅದು ಬಿಟ್ಟು ಬೇರೆ ಹಿಂದುತ್ವದ ರಕ್ಷಣಾ ಕಾರ್ಯ ಅವನಿಂದ ನಡೆಯಲಿಲ್ಲ ಎಂದಿದ್ದಾರೆ.
ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆ ಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ. ಈ ನಡುವೆ ಕಾರ್ಯಕ್ರಮದಿಂದ ಊಟಮಾಡಿ ನಳಿನ್ ಕುಮಾರ್ ಕಟೀಲ್ ಹೊರಡುವ ಸಮಯದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರೂ ಪ್ರವೀಣ್ ನೆಟ್ಟಾರು ಅವರ ಮನೆಗೆ ಆಗಮಿಸಿದ್ದು ಪರಸ್ಪರ ಇಬ್ಬರೂ ಮುಖಾಮುಖಿ ಆದರೂ ಮಾತನಾಡಲಿಲ್ಲ.