-->
ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ - ಕುತೂಹಲ ಕೆರಳಿಸಿದೆ ಮಾಜಿ ಉಪಮುಖ್ಯಮಂತ್ರಿ ನಡೆ

ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ - ಕುತೂಹಲ ಕೆರಳಿಸಿದೆ ಮಾಜಿ ಉಪಮುಖ್ಯಮಂತ್ರಿ ನಡೆ


ಬೆಂಗಳೂರು:  ಮಾಜಿ ಉಪಮುಖ್ಯಮಂತ್ರಿ‌ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಯಿಂದ ಸ್ಪರ್ಧಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲ ಲಕ್ಷ್ಮಣ ಸವದಿಯನ್ನು ಕಾಂಗ್ರೆಸ್ ಸೇರುವ ಬಗ್ಗೆ ಚಿಂತಿಸುವಂತೆ ಮಾಡಿದೆ. ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವದಿಯನ್ನು ಕಾಂಗ್ರೆಸ್ ನತ್ತ ಸೆಳೆಯಲು ಮುತುವರ್ಜಿ ವಹಿಸಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಕಳೆದ ಬಾರಿ ಲಕ್ಷ್ಮಣ ಸವದಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಅಥಣಿಯಿಂದ ವಿಜಯಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮ್ಮಟಳ್ಳಿ ಆಪರೇಶನ್ ಕಮಲಕ್ಕೊಳಗಾಗಿ ಬಿಜೆಪಿ ಸರಕಾರ ರಚನೆಗೆ ಕಾರಣರಾಗಿದ್ದರು.

ಆದರೆ ಈ ಬಾರಿ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲು ರಮೇಶ್ ಜಾರಕಿಹೊಳಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಲಕ್ಷ್ಮ ಸವದಿ ಕಾಂಗ್ರೆಸ್ ಸೇರುವ ಬಗ್ಗೆ ರಾಜಕೀಯ ಬೆಳವಣಿಗೆ ನಡೆಯುತ್ತಿದೆ.


 ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್​ನ ಪ್ರಮುಖ ನಾಯಕರು ಸಂಪರ್ಕ ಮಾಡಿದ್ದು, ಪಕ್ಷಕ್ಕೆ ಸೆಳೆಯಲು ನಿರಂತರ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಸವದಿ ಸಹ ಕೊಪ್ಪಳ ಕಾಂಗ್ರೆಸ್​ ಶಾಸಕರೊಬ್ಬ ಜೊತೆ ಮಾತುಕತೆ ನಡೆಸಿದ್ದಾರೆ ಎಂದು  ತಿಳಿದುಬಂದಿದೆ.

ಸೋನಿಯಾಗಾಂಧಿ, ರಾಹುಲ್ ಗಾಂಧಿ ಸಮ್ಮುಖದಲ್ಲೇ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್​ ನಾಯಕರು ಪ್ಲಾನ್​ ಮಾಡಿದ್ದಾರೆ. ಇತ್ತ ಸವದಿ ಸಹ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಾಯುತ್ತಿದ್ದು, ಒಂದು ವೇಳೆ ಪಟ್ಟಿಯಲ್ಲಿ ತಮಗೆ ಬದಲಿಗೆ ​​ ಮಹೇಶ್ ಕುಮಟಳ್ಳಿ ಟಿಕೆಟ್​ ನೀಡಿದ್ದಲ್ಲಿ ಕಾಂಗ್ರೆಸ್​ ಸೇರುವುದು ಖಚಿತ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article