ಬಿಜೆಪಿ ಯುವಮೋರ್ಚಾ ಮುಖಂಡನ ಇರಿದು ಬರ್ಬರ ಹತ್ಯೆ


ಧಾರವಾಡ: ದುಷ್ಕರ್ಮಿಗಳ ತಂಡವೊಂದು ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಮಾರಕಾಯುಧದಿಂದ ಇರಿದು ಕೊಲೆಗೈದಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ವರದಿಯಾಗಿದೆ.

ಪ್ರವೀಣ್ ಕಮ್ಮಾರ ಹತ್ಯೆಯಾದ ದುರ್ದೈವಿ.

ಪ್ರವೀಣ್ ಕಮ್ಮಾರ ಅವರು ಕೋಟೂರು ಗ್ರಾಪಂ ಉಪಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಮಂಗಳವಾರ ತಡರಾತ್ರಿ ವೈಯುಕ್ತಿಕ ಕಾರಣಕ್ಕೆ ಜಗಳ ನಡೆದಿತ್ತು. ಈ ವೇಳೆ ದುಷ್ಕರ್ಮಿಗಳು ಪ್ರವೀಣ್ ಕಮ್ಮಾರ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರು ಎನ್ನಲಾಗಿದೆ.

ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಗರಗ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu