ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಪುತ್ತೂರು: ಬಿಜೆಪಿ ವಿರುದ್ಧ ಬಂಡಾಯವೆದ್ದ ಅರುಣ್ ಕುಮಾರ್ ಪುತ್ತಿಲ ಇಂದು ಭರ್ಜರಿ ರೋಡ್ ಶೋ - ನಾಮಪತ್ರ ಸಲ್ಲಿಕೆ


ಪುತ್ತೂರು: ಚುನಾವಣಾ ಟಿಕೆಟ್ ದೊರಕದಿದ್ದರಿಂದ ಪುತ್ತೂರು ವಿಧಾನಸಭಾ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಇಂದು ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಸರಿಸುಮಾರು 15 ಸಾವಿರಕ್ಕೂ ಅಧಿಕ ಕಾರ್ಯಕರ್ತರ ನಡುವೆ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ.

ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದವರೆಗೆ 5 ಕಿ.ಮೀ. ಪಾದಯಾತ್ರೆ ಜೊತೆಗೆ ಮೆರವಣಿಗೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರಿಗೆ ದಾರಿಯುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತಿಸಿದರು.


ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿದ್ದು ಬಿಜೆಪಿ ವಿರುದ್ಧವೇ ತೊಡೆ ತಟ್ಟಿದ್ದಾರೆ.