ಬಿಜೆಪಿಗೆ ಮತ್ತೊಂದು ಮರ್ಮಾಘಾತ: ಜಗದೀಶ್ ಶೆಟ್ಟರ್ ಗುಡ್‌ಬೈ

 ಬಿಜೆಪಿಗೆ ಮತ್ತೊಂದು ಮರ್ಮಾಘಾತ: ಜಗದೀಶ್ ಶೆಟ್ಟರ್ ಗುಡ್‌ಬೈ





ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯನ್ನು ದಶಕಗಳ ಕಾಲ ಕಟ್ಟಿ ಬೆಳೆಸಿದ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.




 ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು BJP ಗೆ​ ರಾಜೀನಾಮೆ ಘೋಷಿಸಿದ್ದಾರೆ.

ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ತಡರಾತ್ರಿ ಈ ಘೋಷಣೆ ಮಾಡಿದ್ದು, ಭಾನುವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ತಾವು ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.



ಅಮಿತ್ ಶಾ, ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬಿಜೆಪಿ ಬಲವರ್ಧನೆ ಯಾಗುತ್ತಿದೆ. ಆದರೆ, ಎಲ್ಲೋ ಅವರಿಗೆ ಗೊತ್ತಿಲ್ಲದೇ ಪಕ್ಷದೊಳಗೆ ತಾಳ ತಪ್ಪಿ ಹೋಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.


ರಾಜೀನಾಮೆ ಸಲ್ಲಿಸಿದ ಬಳಿಕ ತಮ್ಮ ಮುಂದಿನ ರಾಜಕೀಯ ನಡೆಯನ್ನು ಪ್ರಕಟಿಸುತ್ತೇನೆ ಎಂದು ಹೇಳಿದ ಅವರು, ತಮಗೆ ಯಾವ ಕಾರಣಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂಬುದನ್ನು ನನಗೆ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಾಯಕರಿಗೆ ಹೇಳಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.


ತಮ್ಮ ವಿರುದ್ಧ ವ್ಯವಸ್ಥಿತ ಪಿತೂರಿ, ಕುತಂತ್ರ ನಡೆದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ನಾಳೆ ನಾನು ವಿಸ್ತೃತವಾಗಿ ಮಾತನಾಡುತ್ತೇನೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು BJP ಗೆ​ ರಾಜೀನಾಮೆ ಘೋಷಿಸಿದ್ದಾರೆ.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ, ಸಂಧಾನ ಸಭೆ ವಿಫಲವಾಗಿದ್ದು, ಇದೀಗ ಜಗದೀಶ್ ಶೆಟ್ಟರ್​ ಅಂತಿಮವಾಗಿ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.


ಬಿಜೆಪಿ ನಾಯಕರ ಜೊತೆ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ಜಗದೀಶ್ ಶೆಟ್ಟರ್‌ ಮತ್ತೆ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆಯನ್ನು ಘೋಷಿಸಿದರು.  ಆದಿತ್ಯವಾರ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.


ಇಲ್ಲಿ ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ ಅವರಿಗೆ 80 ವರ್ಷ. ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ಇವಾಗಿರುವ ಸೀನಿಯರ್ ಲೀಡರ್ ನಾನು. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರೀಟ್ ಮಾಡಿರುವುದು ನನಗೆ ಶಾಂಕಿಂಗ್. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಅಂತಾರೆ.  ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ಇದರ ಹಿಂದೆ ಯಾರು ಇದ್ದಾರೆ  ಎನ್ನುವುದು ನಾನು ಹೇಳಲ್ಲ. ಇನ್ನು ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದರು.


ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆಯೂ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ,  ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರವಾಗಿ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ ಎಂದು  ಅಸಮಾಧಾನ ವ್ಯಕ್ತಪಡಿಸಿದರು