ಶಾಲೆಯ ಆವರಣದಲ್ಲಿ ಬಾಂಬ್ ಇಮೇಲ್ ಸಂದೇಶ : ವಿದ್ಯಾರ್ಥಿಗಳ ತೆರವು


ಹೊಸದಿಲ್ಲಿ: ಇಲ್ಲಿನ ಸಾದಿಕ್ ನಗರದಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ.

ಇಂಡಿಯನ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಇ-ಮೇಲ್ ಸಂದೇಶ ಬೆಳಗ್ಗೆ 10:49ಕ್ಕೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ತಕ್ಷಣ ಶಾಲೆಯಲ್ಲಿರುವ ಮಕ್ಕಳನ್ನು ತೆರವು ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಹೊರಗಡೆ ದೊಡ್ಡ ಸಂಖ್ಯೆಯಲ್ಲಿ ಜನರು, ವಿದ್ಯಾರ್ಥಿಗಳ ಪೋಷಕರು ಜಮಾಯಿಸಿದ್ದರು.‌ 'ನಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಂತೆ ಶಾಲೆಯಿಂದ ನಮಗೆ ಸಂದೇಶ ಬಂದಿದೆ' ಎಂದು ಪೋಷಕರೊಬ್ಬರು ತಿಳಿಸಿದ್ದಾರೆ.

ಶಾಲೆಯ ಅಡ್ಮಿನ್‌ಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಅಜ್ಞಾತ ವ್ಯಕ್ತಿಯಿಂದ ಇದೇ ರೀತಿಯ ಇಮೇಲ್ ಸಂದೇಶ ಬಂದಿತ್ತು. ಅದು ಹುಸಿ ಇಮೇಲ್ ಆಗಿತ್ತು. ನಮ್ಮ ತಂಡಗಳು ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಸ್ಥಳದಲ್ಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂದನ್ ಚೌಧರಿ ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu