-->

Subrahmaya:- ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ' ಕುಕ್ಕೆಯಲ್ಲಿ ಸಚಿವ ಎಸ್.ಅಂಗಾರ ಹೇಳಿಕೆ..

Subrahmaya:- ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ' ಕುಕ್ಕೆಯಲ್ಲಿ ಸಚಿವ ಎಸ್.ಅಂಗಾರ ಹೇಳಿಕೆ..

ಸುಬ್ರಹ್ಮಣ್ಯ

ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.


ಅವರು ರವಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರ ಜತೆ ಮಾತನಾಡಿದರು. ಸಂಘಟನೆ, ಪಕ್ಷದ ಹಿರಿಯರ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದಿನ ಬಿಜೆಪಿ ಆಡಳಿತದ ಅಭಿವೃದ್ಧಿ ಕೆಲಸಗಳನ್ನು ಜನತೆ ಮೆಚ್ಚಿದ್ದಾರೆ. ಅದರಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 135ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ ಎಂದ ಅವರು ಎ.11ರ ಬಳಿಕ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ ಎಂದರು.

ನಿರ್ಧಾರಕ್ಕೆ ಬದ್ಧ

ಸುಳ್ಯಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಕಾಂಕ್ಷಿಗಳು ಇದ್ದಾರೆ. ಸ್ಪರ್ಧೆಗೆ ಆಕಾಂಕ್ಷೆ ಯಾರೂ ವ್ಯಕ್ತಪಡಿಸಬಹುದು. ಆದರೆ ನಿರ್ಧಾರವನ್ನು ಪಾರ್ಟಿ ಮಾಡಲಿದೆ. ಅದರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.

ತುಲಾಭಾರ ಸೇವೆ

ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ, ನವಧಾನ್ಯಗಳಿಂದ 
ತುಲಾಭಾರ ಸೇವೆ ನೆರವೇರಿಸಿದರು. ಈ ಹಿಂದೆ ಸಲ್ಲಿಸಿದ್ದ ಹರಕೆಯಂತೆ ತುಲಾಭಾರ ಸೇವೆ ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ. ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಮನೋಜ್ ಎಸ್, ಸುಬ್ರಹ್ಮಣ್ಯ ಬಿಜೆಪಿ ಮುಖಂಡ ಶ್ರೀಕುಮಾರ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಸೀಮಂತ ಜೋಳದಪ್ಪಗೆ, ವ್ಯವಸ್ಥಾಪನ ಸಮಿತಿ ಸದಸ್ಯ ಶೋಭಾ ಗಿರಿಧರ್, ಮುಂತಾದವರು ಉಪಸ್ಥಿತರಿದ್ದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article