'ಕಿಚ್ಚ' ಸುದೀಪ್ ಇಂದು ಬಿಜೆಪಿ ಸೇರ್ಪಡೆ



ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಎಪ್ರಿಲ್ 5 ರಂದು ಮಧ್ಯಾಹ್ನ 1:30 ಕ್ಕೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ಇಂದಯ ಸಿಎಂ ಬಸವರಾಜ ಬೊಮ್ಮಾಯಿ ಅವರು ಎರಡು ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ಆಯೋಜಿಸಿದ್ದಾರೆ. ಜೊತೆಗೆ ನಟ ದರ್ಶನ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿಯೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಆದರೆ, ದರ್ಶನ್ ಅಥವಾ ಬಿಜೆಪಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.