ಪುತ್ತೂರು : ವಿವಾಹಿತೆ ಬಾವಿಗೆ ಹಾರಿ ಆತ್ಮಹತ್ಯೆ



ಪುತ್ತೂರು: ವಿವಾಹಿತೆಯೋರ್ವರು ತನ್ನ ತವರು ಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯಲ್ಲಿ ನಡೆದಿದೆ.

ಗುಮ್ಮಟಗದ್ದೆಯ ನಿವಾಸಿಯಾಗಿರುವ, ಬೆಳ್ತಂಗಡಿಯ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಷೋತ್ತಮ ಎಂಬವರ ಪತ್ನಿ ಪುಣ್ಯಶ್ರೀ(32) ಮೃತಪಟ್ಟ ಮಹಿಳೆ. 

ಪುಣ್ಯಶ್ರೀ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತವರು ಮನೆ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ. ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಪುಣ್ಯಶ್ರೀ ಮಾತನಾಡಿದ್ದರು. ಅಲ್ಲದೆ ಅದೇ ದಿನ ತನ್ನ ಚಿಕ್ಕಮ್ಮನಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu