ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರಿನಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ಇಳಿಸಿದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 2024 ರಲ್ಲಿ ನಳಿನ್ ಕುಮಾರ್ ಕಟೀಲ್ ಬೆವರಿಳಿಸಲಿದ್ದಾರ? ಹೀಗೊಂದು ಮಾತುಗಳು ಚಾಲ್ತಿಯಲ್ಲಿದೆ.
ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಬಯಸಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ರೋಷಗೊಂಡ ಅವರು ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದರು. ಹಿಂದುತ್ವದ ಆಧಾರದಲ್ಲಿ ಮತ ಕೇಳಿದ ಅವರಿಗೆ ಬಿಜೆಪಿಯ ಸಾವಿರಾರು ಮತಗಳು ಚಲಾವಣೆಯಾಗಿದೆ. ಮತ ಎಣಿಕೆ ವೇಳೆ ಮೊದಲ ಸುತ್ತಿನಿಂದಲೇ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಪ್ರಬಲ ಪೈಪೋಟಿ ನೀಡಿ ಕೇವಲ 4 ಸಾವಿರ ಮತಗಳ ಅಂತರದಿಂದ ಸೋತಿದ್ದರು.
ಫಲಿತಾಂಶ ಪ್ರಕಟವಾದ ಬೆನ್ನಿಗೆ ಅರುಣ್ ಕುಮಾರ್ ಪುತ್ತಿಲ 2024 ರಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂಬ ಪೋಸ್ಟರ್ ವೈರಲ್ ಆಗಿದೆ. ಪುತ್ತಿಲ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆವರಿಳಿಸುವುದು ಖಂಡಿತ ಎನ್ನುವುದು ಪುತ್ತಿಲ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಹೇಳಿಕೆಯನ್ನು ಪುತ್ತಿಲ ಅವರು ಈವರೆಗೆ ನೀಡಿಲ್ಲ