-->
ಮುಂದಿರುವವರು ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟಕ್ಕೆ ಯತ್ನ: ನಾಲ್ವರು ಅರೆಸ್ಟ್

ಮುಂದಿರುವವರು ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟಕ್ಕೆ ಯತ್ನ: ನಾಲ್ವರು ಅರೆಸ್ಟ್


ಚೆನ್ನೈ: ಎದುರು ಇರುವವರು ನಗ್ನವಾಗಿ ಕಾಣುವಂತಹ ನಕಲಿ ಕನ್ನಡಕವನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದ ಬೆಂಗಳೂರು ಮೂಲದ ನಾಲ್ವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಿವಾಸಿಗಳಾದ ಶಿವ ಅಲಿಯಾಸ್ ಸೂರ್ಯ (39), ಕುಗೈಪ್ (37), ಜಿತು (24) ಮತ್ತು ಇರ್ಷಾದ್ (21) ಬಂಧಿತ ಆರೋಪಿಗಳು.

ಈ ನಾಲ್ವರು ಆರೋಪಿಗಳು ನಕಲಿ ಕನ್ನಡಕದಿಂದ ಎದುರಿಗಿರುವವರು ನಗ್ನವಾಗಿ ಕಾಣುತ್ತಾರೆ ಎಂದು ನಂಬಿಸಿ ದೊಡ್ಡ ಮೊತ್ತದ ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ. ನಗ್ನವಾಗಿ ಕಾಣುವ ನಕಲಿ ಕನ್ನಡಕವನ್ನು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸಿಎಮ್‌ಬಿಟಿ ಪೊಲೀಸರು ಕೋಯಂಬೇಡು ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈ ನಾಲ್ವರು ಆರೋಪಿಗಳು ರೈಸ್ ಪುಲ್ಲಿಂಗ್ ಮಾಡುವ ಪುರಾತನ ಕಾಲದ ಕೋಟ್ಯಂತರ ರೂ. ಬೆಲೆ ಬಾಳುವ ವಸ್ತುವನ್ನು ಕೊಡುವುದಾಗಿ ನಂಬಿಸಿ ಜನರಿಗೆ ಮಾರಾಟ ಮಾಡಿ ವಂಚಿಸಿದ್ದಾರೆ ಎಂಬ ಆರೋಪವೂ ಇದೆ.


ಅಲ್ಲದೇ ತಮ್ಮ ಮುಂದೆ ಇರುವವರು ಬೆತ್ತಲೆಯಾಗಿ ಕಾಣಲು ಸಹಾಯ ಮಾಡುವ ಕನ್ನಡಕವನ್ನು ಮಾರಾಟ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ದುಬಾರಿ ಹಣ ನೀಡಿ ಕನ್ನಡಕ ಖರೀದಿಸಿದ ಜನರು ಎದುರಿಗಿರುವವರು ನಗ್ನವಾಗಿ ಕಾಣದಿರುವುದನ್ನು ಪ್ರಶ್ನಿಸಿದರೆ ನಕಲಿ ಪಿಸ್ತೂಲ್‌ನಿಂದ ಬೆದರಿಸಿ ಹಣವನ್ನೂ ದೋಚಿದ್ದಾರೆ ಎಂದು ತಿಳಿದು ಬಂದಿದ್ದು, ಇನ್ನು ಈ ಆರೋಪಿಗಳು ಇನ್ನೆಷ್ಟು ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಿಲ್ಲೆ ಈ ರೀತಿ ಮಾಡಿದ್ದಾರೆ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article