-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ರಾಷ್ಟ್ರವಿರೋಧಿ ಶಕ್ತಿಯೊಂದಿಗೆ ಕಾಂಗ್ರೆಸ್ ಹೊಂದಾಣಿಕೆ - ಮೋದಿ ಟೀಕಾ ಪ್ರಹಾರ

ಮಂಗಳೂರು: ರಾಷ್ಟ್ರವಿರೋಧಿ ಶಕ್ತಿಯೊಂದಿಗೆ ಕಾಂಗ್ರೆಸ್ ಹೊಂದಾಣಿಕೆ - ಮೋದಿ ಟೀಕಾ ಪ್ರಹಾರ



ಮಂಗಳೂರು:  ರಾಷ್ಟ್ರ ವಿರೋಧಿ ಶಕ್ತಿಗಳೊಂದಿಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು, ಚುನಾವಣೆಗೂ ಅವರಿಂದ ಸಹಕಾರ ಪಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.​





ಮಂಗಳೂರಿನ ಮೂಡಬಿದಿರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮುಲ್ಕಿಯಲ್ಲಿಂದು ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ರಾಷ್ಟ್ರ ವಿರೋಧಿಗಳ ಮೇಲಿನ ಪ್ರಕರಣಗಳನ್ನು ಕಾಂಗ್ರೆಸ್‌ ಹಿಂಪಡೆಯುತ್ತಿದೆ. ಈ ಮೂಲಕ ಭಯೋತ್ಪಾದಕ ಬೆಂಬಲಿಗರನ್ನು ರಕ್ಷಿಸುತ್ತದೆ. ರಾಜಸ್ಥಾನದಲ್ಲಿ ಬಾಂಬ್ ಸ್ಪೋಟದಲ್ಲಿ ಭಾಗಿಯಾದ ಆರೋಪಿಗಳನ್ನು ಕಾಂಗ್ರೆಸ್ ರಕ್ಷಿಸಿದೆ. ಎಲ್ಲಾ ಆರೋಪಿಗಳಿಗೂ ಕ್ಲೀನ್ ಚಿಟ್ ದೊರಕಿದ್ದು ಯಾರಿಗೂ ಶಿಕ್ಷೆಯಾಗಲಿಲ್ಲ. ಕಾಂಗ್ರೆಸ್​ ತುಷ್ಟೀಕರಣ ರಾಜಕೀಯ ನೀತಿಯನ್ನು ಅನುಸರಿಸುತ್ತಿದ್ದು, ಕರ್ನಾಟಕದಲ್ಲಿ ಇಂತಹ ಕಾಂಗ್ರೆಸ್​ ಅನ್ನು ಅಧಿಕಾರಕ್ಕೆ ಬರಲು ಬಿಡುತ್ತೀರಾ? ನಿಮ್ಮ ರಾಜ್ಯವನ್ನು ನಾಶ ಮಾಡಲು ಬಿಡುತ್ತೀರಾ? ನಿಮ್ಮ ಭವಿಷ್ಯವನ್ನು ಹಾಳು ಮಾಡಲು ಬಿಡುತ್ತೀರಾ? ದೇಶಾದ್ಯಂತ ಶಾಂತಿ ಮತ್ತು ಪ್ರಗತಿಯನ್ನು ಬಯಸುವ ಜನತೆ ಮೊದಲು ತಮ್ಮ ರಾಜ್ಯದಿಂದ ಕಾಂಗ್ರೆಸ್​ನವರನ್ನು ಹೊರಹಾಕುತ್ತಾರೆ ಎಂದು ಮೋದಿ ಹೇಳಿದರು.

ಬಿಜೆಪಿ ಸಬ್​ ಕಾ ಸಾಥ್​​, ಸಬ್​ ಕಾ ವಿಕಾಸ್​ ಮಂತ್ರದೊಂದಿಗೆ ಮುನ್ನಡೆಯುತ್ತಿದ್ದೇವೆ. ಇದಕ್ಕೆಲ್ಲ ಸಂತರ ಪ್ರೇರಣೆಯೇ ಕಾರಣ. ದೇಶದ 140 ಕೋಟಿ ಜನತೆಯೇ ನಮ್ಮ ರಿಮೋಟ್​ ಕಂಟ್ರೋಲ್​. ಮೇ 10ರ ಮತದಾನದ ದಿನ ದೂರವಿಲ್ಲ. ದೇಶದಲ್ಲಿ ಕರ್ನಾಟಕವನ್ನು ನಂ.1 ಮಾಡುವುದು ಬಿಜೆಪಿಯ ಸಂಕಲ್ಪ. ಆಧುನಿಕ ಮೂಲಭೂತ ಸೌಕರ್ಯಗಳನ್ನು ಬಲ ಪಡಿಸಿ ಸೂಪರ್‌ಪವರ್‌ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿ. ಇದೇ ನಮ್ಮ ರೋಡ್​ ಮ್ಯಾಪ್​ ಆಗಿದೆ ಎಂದರು.

ಬಿಜೆಪಿ ಸರ್ಕಾರದ ಜನೋಪಯೋಗಿ, ಜನ ಕಲ್ಯಾಣ ಯೋಜನೆಗಳನ್ನು ಹಿಂದಕ್ಕೆ ಕೊಂಡೊಯ್ಯಲು ಕಾಂಗ್ರೆಸ್​ ಮತ ಕೇಳುತ್ತಿದೆ. ನಾನು ನಾಲ್ಕೈದು ದಿನಗಳಿಂದ ಚುನಾವಣಾ ಪ್ರಚಾರ ಮಾಡುತ್ತಿದ್ದೇನೆ. ಎಲ್ಲೆಡೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂಬ ಮಾತನ್ನು ಕೇಳುತ್ತಿದ್ದೇನೆ ಎಂದು ಮೋದಿ ಹೇಳಿದರು. ಬಿಜೆಪಿ ಕರ್ನಾಟಕವನ್ನು ನಂ.1 ರಾಜ್ಯ ಮಾಡಲು ಬಯಸಿದರೆ, ಶೇ.85ರಷ್ಟು ತಿನ್ನುವ ಕಾಂಗ್ರೆಸ್​ ದೆಹಲಿಯಲ್ಲಿ ಕುಳಿತಿರುವ ಒಂದು ಕುಟುಂಬದ ನಂ.1 ಎಟಿಎಂ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಕಾಂಗ್ರೆಸ್​ ರಾಜ್ಯವನ್ನು ದಶಕಗಳ ಹಿಂದೆಕ್ಕೆ ಕೊಂಡೊಯ್ದು ಗಡ್ಡೆಯಲ್ಲಿ ಹಾಕಲು ಮುಂದಾಗಿದೆ. ಇದರಿಂದ ಕರ್ನಾಟಕ ಜನತೆ ಕಾಂಗ್ರೆಸ್​ನಿಂದ ಸಾವಧಾನದಿಂದ ಇರಬೇಕು. ಜೆಡಿಎಸ್​ ಸಹ ಇದೇ ರೀತಿಯಾದ ಕಚ್ಚೆ-ಪಚ್ಚೆ ಪಕ್ಷದವರು ಎಂದು ಟೀಕಿಸಿದರು.




ರಾಜ್ಯದಲ್ಲಿ ಅಸ್ಥಿರ ಸರ್ಕಾರ ಬಂದರೆ, ಜನತೆಯ ಭವಿಷ್ಯವು ಅಸ್ಥಿರವಾಗಿರುತ್ತದೆ. ನಿಮ್ಮ ಕನಸು ಮಾಡಿಕೊಳ್ಳಲು ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಸಾಧ್ಯವಿಲ್ಲ. ಕರ್ನಾಟಕದ ಅಸ್ಥಿರತೆ ಇದ್ದರೆ, ನಿಮ್ಮ ಭಾಗ್ಯವೂ ಅಸ್ಥಿರವಾಗಿರುತ್ತದೆ. ಯಾಕೆಂದರೆ, ಕಾಂಗ್ರೆಸ್​ ಶಾಂತಿ ಮತ್ತು ವಿಕಾಸದ ವಿರೋಧಿ. ತುಷ್ಟೀಕರಣ ರಾಜಕೀಯವನ್ನು ಹೆಚ್ಚಿಸುತ್ತದೆ. ಕೆಲ ವರ್ಷಗಳ ಹಿಂದೆ ರಾಜಸ್ಥಾನದಲ್ಲಿ ಬಾಂಬ್​ ಸ್ಫೋಟವಾಗಿತ್ತು. 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಆದರೆ, ಅಲ್ಲಿನ ಸರ್ಕಾರದ ಪೊಲೀಸರು ಎಲ್ಲ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದರು ಎಂದು ಮೋದಿ ಆರೋಪಿಸಿದರು

Ads on article

Advertise in articles 1

advertising articles 2

Advertise under the article

ಸುರ