ಉಡುಪಿ: ಬಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾವನೆಯು ಕಾಂಗ್ರೆಸ್ ಮುಂದಿಲ್ಲ. ಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಈ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಯಾವುದೇ ಹಕ್ಕು ಹೊಂದಿಲ್ಲ ಎಂದು ಉಡುಪಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ರವರನ್ನು ಬಿಜೆಪಿಯೀಗ ಆರಾಧಿಸುತ್ತದೆ. ಆದರೆ ಪಟೇಲ್ ಅವರು ಆರ್ ಎಸ್ಎಸ್ ಅನ್ನು ಬ್ಯಾನ್ ಮಾಡಿದ್ದರು. ಆದರೆ ಜವಾಹರಲಾಲ್ ನೆಹರೂ ಅವರು ಬ್ಯಾನ್ ಅನ್ನು ವಾಪಾಸ್ ಪಡೆದಿದ್ದರು. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯ ಕುರಿತು ಸ್ಪಷ್ಟ ತೀರ್ಪು ನೀಡಿದೆ. ಅದರ ಭಾಗವಾಗಿ ಈ ಪ್ರಸ್ತಾಪ ಮಾಡಿದ್ದೇವೆ. ಆದರೆ ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ ವೀರಪ್ಪ ಮೊಯಿಲಿ ಎಂದು ಹೇಳಿದರು.