21 ವರ್ಷದ ಯುವತಿ ನೇಣು ಬಿಗಿದು ಆತ್ಮಹತ್ಯೆ



ಮಡಿಕೇರಿ:21 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.

ದೀಕ್ಷಿತ (21) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಮೃತ ಯುವತಿ. ಈಕೆ ವಿರಾಜಪೇಟೆ ತಾಲೂಕಿನ ಕುಟ್ಟಂದಿ ಗ್ರಾಮದ ಸದ್ಯ ವಿರಾಜಪೇಟೆ ಪಟ್ಟಣದಲ್ಲಿ ವಾಸವಿರುವ ದಿ.ನಾಣಯ್ಯ ಹಾಗೂ ಸರಸ್ವತಿ ದಂಪತಿಯ ದ್ವಿತೀಯ ಪುತ್ರಿ ಎಂದು ತಿಳಿದು ಬಂದಿದೆ.

ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ದೀಕ್ಷಿತಾಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.