ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ಮಕ್ಕಳಿಬ್ಬರು ಸೇರಿ ಐವರು ಸ್ಥಳದಲ್ಲೇ ದಾರುಣ ಸಾವು


ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರೊಂದು ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150 (a) ರಲ್ಲಿ ನಡೆದಿದೆ.

ಈ ಅಪಘಾತದಲ್ಲಿ 13 ಮಂದಿಗರ ಗಾಯವಾಗಿದೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುನೀರ್ (40), ನಯಾಮತ್ (40), ಮುದ್ದತ್ ಶಿರ್ (12), ರಮೀಜಾ ಬೇಗಂ (50) ಹಾಗೂ ಸುಮ್ಮಿ (12) ಮೃತಪಟ್ಟವರು.

ಇವರು ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ಚಕ್ರ ಎಂಬಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಈ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu