ಕಡಬ: ದುರಸ್ತಿಗೆಂದು ವಿದ್ಯುತ್ ಕಂಬವೇರಿದ ಲೈನ್ ಮ್ಯಾನ್ ವಿದ್ಯುತ್ ಆಘಾತದಿಂದ ದಾರುಣ ಸಾವು


ಮಂಗಳೂರು: ರಿಪೇರಿಗೆಂದು ವಿದ್ಯುತ್‌ ಕಂಬವೇರಿದ್ದ ಲೈನ್ ಮ್ಯಾನ್ ವಿದ್ಯುತ್‌ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜೂನ್ 1ರಂದು ಕಡಬದಲ್ಲಿ ನಡೆದಿದೆ.

ಕಡಬ ಮೆಸ್ಕಾಂ ಲೈನ್ ಮ್ಯಾನ್, ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತಪಟ್ಟ ದುರ್ದೈವಿ.

ಕಡಬದ ಮುಳಿಮಜಲು ಬಳಿಯ ಕಾಯರಡ್ಕ ಎಂಬಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ದ್ಯಾಮಣ್ಣ ದುರಸ್ತಿಗೆಂದು ಲೈಟ್ ಕಂಬವೇರಿದ್ದರು‌. ಈ ವೇಳೆ ಅವರು ವಿದ್ಯುತ್ ಆಘಾತಗೊಂಡು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu