ಕಡಬ: ಹಠಾತ್ ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ದಾರುಣ ಸಾವು
Friday, June 2, 2023
ಕಡಬ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ನಿಧನಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಷೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ರಶ್ಮಿತಾ(18) ಮೃತಪಟ್ಟ ವಿದ್ಯಾರ್ಥಿನಿ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲವೆಂದು ಮನೆಗೆ ಬಂದಿದದರು. ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮನೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ.