ಉಳ್ಳಾಲ: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ - ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು


ಉಳ್ಳಾಲ: ವಿದ್ಯಾರ್ಥಿನಿಯರನ್ನು ಕರೆದುಕೊಂಡು ಸಮುದ್ರವಿಹಾರಕ್ಕೆಂದು ಬಂದಿದ್ದ ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ಮಾಡಿ ನೈತಿಕ ಪೊಲೀಸ್‌ಗಿರಿ ಎಸರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಖಾಸಗಿ ವಿದ್ಯಾಸಂಸ್ಥೆಗೆ ಸೇರಿರುವ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಮೂವರು ವಿದ್ಯಾರ್ಥಿಗಳು ಅನ್ಯಕೋಮಿನವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ಏಕಾಏಕಿ ತಂಡ ದಾಳಿ ನಡೆಸಿದೆ.

ದಾಳಿಯಿಂದ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆ ಎಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಸದ್ಯ ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರತೀರದಲ್ಲಿ ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu