ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ: ನಳಿನ್ ಕುಮಾರ್ ಕಟೀಲು


ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ಅವರು ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ್ದಾರೆ ಎಂಬ ಸುದ್ದಿಗಳು ಬಿತ್ತರವಾಗುತ್ತಿರುವ ಹಿನ್ನೆಲೆಯಲ್ಲಿ  ಆ ಸುದ್ದಿ ಸುಳ್ಳು ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ

ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜಿನಾಮೆಯನ್ನೂ ನೀಡಿದ್ದೇನೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ ಎಂದು ವರದಿಯಾಗಿತ್ತು.


ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ

ಪತ್ರಿಕಾ ಪ್ರಕಟನೆ ಹೀಗಿದೆ...
ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.


 (ಕರುಣಾಕರ ಖಾಸಲೆ)
  ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
BREAKING NEWS
Loading latest news...
Join our WhatsApp Channel Powered By : Online Pudu