ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕ ಯುವಕ ಅರೆಸ್ಟ್


ಮಂಗಳೂರು: ಅಪ್ರಾಪ್ತೆಯನ್ನು ಅಪಹರಣಗೈದು ಅತ್ಯಾಚಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಯುವಕನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಜಲ್ಲಿಗುಡ್ಡೆ ನಿವಾಸಿ ಲಿಖಿತ್ (19) ಬಂಧಿತ ಆರೋಪಿ.

ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ  ಪ್ರೌಢಶಾಲಾ ವಿದ್ಯಾರ್ಥಿನಿಯನ್ನು ಇನ್‌ಸ್ಟಾಗ್ರಾಂ ಮೂಲಕ ಆರೋಪಿ ಲಿಖಿತ್ ಪರಿಚಯ ಮಾಡಿಕೊಂಡಿದ್ದ. ಈ ಪರಿಚಯದ ಬಳಿಕ ಸಲುಗೆ ಬೆಳೆದು ಇಬ್ಬರೂ ಆತ್ಮೀಯರಾಗಿದ್ದರು. ಈ ಮಧ್ಯೆ ಆರೋಪಿ ಲಿಖಿತ್ ಅಪ್ರಾಪ್ತೆಯನ್ನು ಅಪಹರಿಸಿದ್ದನು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅದರಂತೆ ಕಾರ್ಯಾಚರಣೆ ಪೊಲೀಸರು ನಡೆಸಿದ್ದಾರೆ. ಈ ವೇಳೆ ಬಾಲಕಿಯನ್ನು ಲಿಖಿತ್ ತನ್ನ ಗೆಳೆಯನ ಬಾಡಿಗೆ ಕೊಠಡಿಯಲ್ಲಿ ಕೂಡಿ ಹಾಕಿರುವುದು ಪತ್ತೆಯಾಗಿದೆ. ಸಂತ್ರಸ್ತೆಯನ್ನು ರಕ್ಷಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಅಪಹರಣ, ದೌರ್ಜನ್ಯ, ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu