Subrahmanya:- ಡಾI ತ್ರಿಮೂರ್ತಿಯವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ.

ಕಡಬ 

ಜೂನ್ 20: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು( ರಿ) ದೊಡ್ಡಬಳ್ಳಾಪುರ, ಬೆಂಗಳೂರು. ಇವರು ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕ ಮಾತ್ರರಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾlತ್ರಿಮೂರ್ತಿ ಅವರನ್ನು ಆಯ್ಕೆ ಮಾಡಿರುತ್ತಾರೆ. 

ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ  ಗೋಪಾಲಕೃಷ್ಣರವರು ತಿಳಿಸಿರುತ್ತಾರೆ.