ಕಡಬ- 14 ವರ್ಷದ ಶಾಲಾ ಬಾಲಕಿಯನ್ನು ಗರ್ಭಿಣಿಯಾಗಿಸಿದ ಸೋದರ ಸಂಬಂಧಿ


ಕಡಬ: ಅಪ್ರಾಪ್ತ ವಯಸ್ಸಿನ ಬಾಲಕಿ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಕಡಬ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. 


ಕೋಡಿಂಬಾಳದ ನಿಶಾಂತ್ (20) ಬಂಧಿತ ಯುವಕ.  ಈತ ತನ್ನ ಸೋದರ ಸಂಬಂಧಿ 14ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಅರೋಪಿಸಲಾಗಿದೆ. 

ತಾಯಿ ಜತೆ ಬಾಲಕಿ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.