ಉಜೈನಿ : 15 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಯಸ್ಸಿನ ಮೂವರು ಅತ್ಯಾಚಾರ ಎಸಗಿ, ನಂತರ ಕೃತ್ಯದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಯಲ್ಲಿ ನಡೆದಿದೆ ಎಂದು ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ ಎಂದು ದೂರು ನೀಡಿದ್ದಾರೆ. ಲಸುದಿಯಾ ಜೈಸಿಂಗ್ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ವಿಡಿಯೊ ಹಂಚಿಕೆಯಾದ ನಂತರ ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
'ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಕ್ಕಳ ವಿರುದ್ಧಲೈಂಗಿಕ ಅಪರಾಧ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ. ಘಟನೆ ಕುರಿತ ಹೆಚ್ಚಿನ ಮಾಹಿತಿಗೆ ತನಿಖೆ ನಡೆಸಲಾಗುತ್ತಿದೆ ಎಂದು ಬಿರ್ಲಾ ಗ್ರಾಮ ಪೊಲೀಸ್ ಠಾಣೆ ಉಸ್ತುವಾರಿ ಕರಣ್ ಸಿಂಗ್ ತಿಳಿಸಿದ್ದಾರೆ.