-->
ಮಂಗಳೂರು- ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಬೇಡಿಕೆ- ಐದು ಲಕ್ಷ ಲಂಚ ಸ್ವೀಕರಿಸುವಾಗ ಅನುದಾನಿತ ಶಾಲೆಯ ಸಂಚಾಲಕಿ ಲೋಕಾಯುಕ್ತ ಬಲೆಗೆ

ಮಂಗಳೂರು- ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಬೇಡಿಕೆ- ಐದು ಲಕ್ಷ ಲಂಚ ಸ್ವೀಕರಿಸುವಾಗ ಅನುದಾನಿತ ಶಾಲೆಯ ಸಂಚಾಲಕಿ ಲೋಕಾಯುಕ್ತ ಬಲೆಗೆ

ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂ ಗಳ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ( LOKAYUKTHA) ಬಲೆಗೆ ಬಿದ್ದಿದ್ದಾರೆ.

ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭರಾಣಿ ( SHOBHA RANI) ಎಂಬವರು ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.  ಇವರು ಜುಲೈ 31 ರಂದು   ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಮೇ 25  ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ನ ಸಂಚಾಲಕರಾದ  ಜ್ಯೋತಿ ಎನ್ ಪೂಜಾರಿ (JYOTHI N POOJARY) ರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿಕೊಂಡಿದ್ದರು. 

ಆದರೆ ಸಂಚಾಲಕರಾದ  ಜ್ಯೋತಿ.ಎನ್.ಪೂಜಾರಿ ( Jyothi n poojary) ರವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಶೋಭರಾಣಿ ( SHOBHARANI) ಅವರಿಗೆ ಸತಾಯಿಸಿದ್ದಾರೆ. 

ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂ.20 ಲಕ್ಷ ಲಂಚ ಹಣ ಕೊಡಬೇಕೆಂದು ಡಿಮ್ಯಾಂಡದ ಇಟ್ಟಿದ್ದರು. ಆ ನಂತರ ಪುನ: ಶೋಭರಾಣಿ ಅವರು ಜುಲೈ 5 ರಂದು ವಾಪಾಸ್ಸು ಮ್ಯಾನೇಜ್‌ಮೆಂಟ್‌ನ ಸಂಚಾಲಕರ ವಾಸದ ಮನೆ ಬಳಿ ಹೋಗಿ ಸಂಚಾಲಕರಾದ  ಜ್ಯೋತಿ.ಎನ್. ಪೂಜಾರಿ ( Jyothi. N poojary) ರವರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿಕೊಂಡಿದ್ದಾರೆ. ಆಗ ಜ್ಯೋತಿ ಎನ್ ಪೂಜಾರಿ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಬೇಕಾದರೆ, ರೂ 5 ಲಕ್ಷ  ಕೊಡಬೇಕು ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಇಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ನ ಸಂಚಾಲಕರಾದ  ಜ್ಯೋತಿ ಎನ್ ಪೂಜಾರಿ ಅವರು ಶೋಭರಾಣಿ ಅವರಿಂದ 5 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸ್ಥಳದಲ್ಲಿಯೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ. ಆರೋಪಿ ಜ್ಯೋತಿ ಎನ್ ಪೂಜಾರಿ ಯನ್ನು ಅರೆಸ್ಟ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು  ಲಂಚದ ಹಣವನ್ನು ವಶಪಡಿಸಿಕೊಂಡಿದ್ದಾರೆ.
 
ಮಂಗಳೂರು ಲೋಕಾಯುಕ್ತ SP ಸಿ.ಎ. ಸೈಮನ್ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರುಗಳಾದ  ಕಲಾವತಿ.ಕೆ,  ಚಲುವರಾಜು. ಬಿ, ಹಾಗೂ ಪೊಲೀಸ್ ನಿರೀಕ್ಷಕರಾದ ವಿನಾಯಕ ಬಿಲ್ಲವ ಇವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು.

Ads on article

Advertise in articles 1

advertising articles 2

Advertise under the article