ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ- ಇಬ್ಬರು ಆರೋಪಿಗಳ ಅರೆಸ್ಟ್

ಮಂಗಳೂರು: ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದ  ಇಬ್ಬರನ್ನು ಮಂಗಳೂರು ಪೊಲೀಸರು ‌ಬಂಧಿಸಿದ್ದಾರೆ.

ಮಂಗಳೂರಿನ‌ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್ ಯಾನೆ ದೀಕ್ಷಿತ್ ಅಳಪೆ (32) ಮತ್ತು  ಅಳಪೆ ಬಜಾಲ್ ನ ಲಾಯ್ಡ್ ಪಿಂಟೋ (32) ಬಂಧಿತರು.


ಮಂಗಳೂರಿನ ಮೆಡಿಕಲ್ ಕಾಲೇಜೊಂದರ  6 ವಿದ್ಯಾರ್ಥಿಗಳು ಶುಕ್ರವಾರ ಸಂಜೆ 5.30ರ ಸುಮಾರಿಗೆ ಪಣಂಬೂರು ಬೀಚ್ ಗೆ ಹೋಗಿದ್ದಾರೆ. ಯುವಕರು ಬೈಕ್ ನಲ್ಲಿ ಬಂದಿದ್ದರೆ ಯುವತಿಯರು ಬಸ್ ನಲ್ಲಿ ಬಂದಿದ್ದಾರೆ.

ಇವರು ಬೀಚ್ ನಲ್ಲಿದ್ದ ವೇಳೆ ಇಬ್ಬರು ಅಪರಿಚಿತರು ಇವರ ಚಲನವಲನಗಳನ್ನು ಗಮನಿಸುತ್ತ, ಮೊಬೈಲ್ ಫೋನ್ ಗಳಲ್ಲಿ ವಿಡಿಯೊ ಮಾಡಿದ್ದಾರೆ. ವಿದ್ಯಾರ್ಥಿಗಳು ಇದನ್ನು ಗಮನಿಸಿದರೂ ಅದನ್ನು ‌ಪ್ರಶ್ನಿಸದೆ ತಮ್ಮ ಪಾಡಿಗೆ ತಾವು ಇದ್ದು ಹೋಗಿದ್ದಾರೆ ಎನ್ನಲಾಗಿದೆ.

ನಂತರ ಯುವಕರು ಬೈಕ್ ನಲ್ಲಿ, ಯುವತಿಯರು ಬಸ್ ನಲ್ಲಿ ಹಿಂದಿರುಗಿದ್ದಾರೆ.

ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ  ಯುವತಿ ನಗರದ ಚಿಲಿಂಬಿಯಲ್ಲಿ ಬಸ್ ನಿಂದ ಇಳಿದು ತನ್ನ ಪಿಜಿ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಣಂಬೂರು ಬೀಚ್ ನಲ್ಲಿ ಹಿಂಬಾಲಿಸುತ್ತಿದ್ದ ಅದೇ ಅಪರಿಚಿತರು ಹಿಂಬಾಲಿಸಿಕೊಂಡು ಬಂದು ಯುವತಿಗೆ ಬೆದರಿಸಿದ್ದಾರೆ. ಯುವತಿಗೆ  'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ದಿ ಬರುವುದಿಲ್ಲಾ ಎಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿನಿಯರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 



ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್  ಮತ್ತು  ಮೊಬೈಲ್  ಪೋನ್  ಗಳನ್ನು ವಶಪಡಿಸಲಾಗಿದೆ.  ಪ್ರಕರಣದ  ತನಿಖೆ  ಮುಂದುರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu