ಮಂಗಳೂರಿನಲ್ಲಿ ಪತ್ರಕರ್ತನ‌ ಮೇಲೆ ನೈತಿಕ ಪೊಲೀಸ್ ಗಿರಿ- ಇಬ್ಬರು ಅರೆಸ್ಟ್!


ಮಂಗಳೂರಿನಲ್ಲಿ ಮತ್ತೆ ಮುಂದುವರೆದ ನೈತಿಕ ಪೊಲೀಸರ ಅಟ್ಟಹಾಸ ಮುಂದುವರಿದಿದ್ದು ಇದೀಗ ಪತ್ರಕರ್ತರೊಬ್ಬರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ.

ಮಾಧ್ಯಮ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ದುಷ್ಜರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೋಟೇಕಾರು ನಿವಾಸಿ ಚೇತನ್ (37) ಹಾಗೂ ಯೆಯ್ಯಾಡಿ ನಿವಾಸಿ ನವೀನ್(43) ಬಂಧಿಸಿದ್ದಾರೆ.

ಮಂಗಳೂರಿನ ಸ್ಥಳೀಯ ಖಾಸಗಿ ನ್ಯೂಸ್ ವೆಬ್ ಸೈಟ್ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರಿನ ಕಾವೂರು ಬಳಿಯ ರೆಸ್ಟೋರೆಂಟ್ ಬಳಿ ನಡೆದ ಘಟನೆ ನಡೆದಿದೆ. ಸ್ನೇಹಿತೆಯ ಜೊತೆ ಊಟಕ್ಕೆ ತೆರಳಿದ್ದ ವರದಿಗಾರ ಅಭಿಜಿತ್  ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ.

ಊಟ ಮುಗಿಸಿ ವಾಪಾಸ್ ಬರ್ತಿದ್ದ ವೇಳೆ ಪ್ರಶ್ನಿಸಿದ ಯುವಕರು ನೀನು ಬ್ಯಾರಿಯಾ? ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಹಿಂದೂ ಹುಡುಗಿ ಜೊತೆ ಏನು ಕೆಲಸ ಅಂತ ನಿಂದನೆ ಮಾಡಿದ್ದಾರೆ. ಹಿಂದೂ ಯುವಕನನ್ನ ಮುಸ್ಲಿಂ ಎಂದು ತಿಳಿದು ಹಲ್ಲೆಗೆ ಯತ್ನ ಮಾಡಿದ್ದರು.ಈ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದರು.

ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 28ರ ರಾತ್ರಿ ಘಟನೆ ನಡೆದಿದ್ದು, ಇಂದು ಆರೋಪಿಗಳ ಬಂಧನ ಮಾಡಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu