ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಂಟ ಸಮಾಜದ ಪ್ರತಿಭಾ ಪುರಸ್ಕಾರ

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಂಟ ಸಮಾಜದ ಪ್ರತಿಭಾ ಪುರಸ್ಕಾರ





ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ನಡೆಯಲಿದೆ.


ಈ ಕಾರ್ಯಕ್ರಮ ಆಗಸ್ಟ್ 15ರಂದು ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯಲಿದ್ದು, ಬಂಟ ಸಮಾಜದ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು.


ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಮತ್ತು ನಿಗದಿತ ಅರ್ಜಿ ನಮೂನೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 10, 2023.


ವಿದ್ಯಾರ್ಥಿಗಳು ತಮ್ಮ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿಯನ್ನು ಬಂಟ್ಸ್ ಹಾಸ್ಟೆಲ್‌ನಲ್ಲಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಸಮಿತಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 600 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಮತ್ತು ಪಿಯುಸಿ ಪರೀಕ್ಷೆಯಲ್ಲಿ 575 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಸಿಬಿಎಸ್‌ಇ ಮತ್ತು ಐಸಿಎಸ್‌ ಸಿಲೆಬಸ್‌ನಲ್ಲಿ ಗ್ರೇಡ್ ಎ++ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು.