ಕಂಪೆನಿಯ ಎಂಡಿ, ಸಿಇಒನ ಹಾಡಹಗಲೇ ಬರ್ಬರವಾಗಿ ಹತ್ಯೆಗೈದ ಮಾಜಿ ಉದ್ಯೋಗಿ


ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ. ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ (ಸಿಇಒ)ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಈ ಡಬಲ್ ಮರ್ಡರ್ ನಡೆದಿದೆ. ಏರೋನಿಕ್ಸ್ ಇಂಟರ್‌ನೆಟ್ ಕಂಪೆನಿಯ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಸಿಎಒ ವಿನು ಕುಮಾರ್ ಕೊಲೆಯಾದ ದುರ್ದೈವಿಗಳು. ಈ ಕಂಪೆನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ಫೆಲಿಕ್ಸ್ ಜೋಕರ್ ಫೆಲಿಕ್ಸ್ ಎಂದೂ ಕರೆಸಿಕೊಳ್ಳುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ.


ಏರೋನಿಕ್ಸ್ ಕಂಪೆನಿಯಿಂದ ಹೊರಬಂದ ಫೆಲಿಕ್ಸ್ ತನ್ನದೇ ಆದ ಸ್ವಂತ ಕಂಪೆಯನ್ನು ಆರಂಭಿಸಿದ್ದ. ಆದರೆ ತನ್ನ ಉದ್ಯಮಕ್ಕೆ ಹಳೆಯ ಕಂಪೆನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ. ಒಟ್ಟು ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu