ಮಂಗಳೂರಿನಲ್ಲಿ ರೈಲಿನಲ್ಲಿ FIGHT- ಕತ್ತಿ ಹಿಡಿದು ದಾಂಧಲೆ

ಮಂಗಳೂರು: ರೈಲಿನಲ್ಲಿ ಕುಡಿದ ಮತ್ತಿನಲ್ಲಿ ಕತ್ತಿಯಿಂದ ದಾಳಿ ನಡೆಸಿ ಇಬ್ಬರು ಆತಂಕ ಸೃಷ್ಟಿಸಿದ ಘಟನೆ ಜೂನ್ 30 ರಂದು ನಡೆದಿದೆ

ಇಬ್ಬರನ್ನು ಮಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.   ಶುಕ್ರವಾರ ದಾದರ್‌ನಿಂದ ತಿರುನಲ್ವೇಲಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಸುರತ್ಕಲ್ ಮತ್ತು ತೋಕೂರು ರೈಲ್ವೆ ಹಳಿಗಳ ನಡುವೆ ಕತ್ತಿಗಳಿಂದ ದಾಂಧಲೆ ನಡೆಸಿ ಆತಂಕ ಸೃಷ್ಟಿಸಿದ್ದಾರೆ.  ಈ  ಇಬ್ಬರನ್ನು ಬಂಧಿಸಿ ಎರಡು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡಿನ ಜಯಪ್ರಭು ಮತ್ತು ಪ್ರಸಾದ್ ಬಂಧಿತ ವ್ಯಕ್ತಿಗಳು. ಇವರು ಗೋವಾದಿಂದ ತಿರುನಲ್ವೇಲಿ ಗೆ ಪ್ರಯಾಣಿಸುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಇವರಿಬ್ಬರು ಸುರತ್ಕಲ್ ಮತ್ತು ತೋಕೂರು ಮಧ್ಯೆ ಕತ್ತಿ ಹಿಡಿದು ದಾಂಧಲೆ ನಡೆಸಿದ್ದಾರೆ

 ರೈಲು ಸಂಖ್ಯೆ 22629 ರಲ್ಲಿ ಈ ಘಟನೆ ಸಂಭವಿಸಿದ್ದು ಆರೋಪಿಗಳು  ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದರು. ಇಬ್ಬರೂ ಕತ್ತಿಗಳನ್ನು ತೆಗೆದು ದಾಂಧಲೆ ನಡೆಸಲು ಪ್ರಾರಂಭಿಸುತ್ತಿದ್ದಂತೆ, ಎಸ್ 7 ರಿಸರ್ವೇಶನ್ ಕಂಪಾರ್ಟ್‌ಮೆಂಟ್‌ನ ಪ್ರಯಾಣಿಕರು ಭಯದಿಂದ ಜನರಲ್ ಕಂಪಾರ್ಟ್‌ಮೆಂಟ್ ನತ್ತ  ಓಡಿದ್ದಾರೆ.  ಆದರೆ, ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಬಾಬು ಕೆ, ಶ್ರೀನಿವಾಸ್ ಶೆಟ್ಟಿ ಮತ್ತು ತಿಮ್ಮಪ್ಪ ಗೌಡ ರಿಸ್ಕ್ ತೆಗೆದುಕೊಂಡು ಇಬ್ಬರು ವ್ಯಕ್ತಿಗಳ ಕೈಯಿಂದ ಕತ್ತಿಗಳನ್ನು ತೆಗೆದುಕೊಂಡು ಅವರಿಬ್ಬರನ್ನು ಹಿಡಿದಿಟ್ಟುಕೊಂಡಿದ್ದಾರೆ.  ನಂತರ ಅವರನ್ನು ಮಂಗಳೂರಿನ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.
 
 

 
 ಆರೋಪಿಗಳು ಕುಡಿದ ಮತ್ತಿನಲ್ಲಿ ಕತ್ತಿಯಿಂದ ದಾಳಿ ಮಾಡಿದ್ದಾರೆ. ಇವರು ಗೋವಾದಲ್ಲಿ ರೈಲು ಹತ್ತಿದ್ದರು. ಇಬ್ಬರನ್ನು ಬಂಧಿಸಲಾಗಿದೆ ಕತ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu