-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
"ನಿಮ್ಮೆಲ್ಲರ ಆಶೀರ್ವಾದ" ಇದೇ ಶುಕ್ರವಾರ ತೆರೆಗೆ!

"ನಿಮ್ಮೆಲ್ಲರ ಆಶೀರ್ವಾದ" ಇದೇ ಶುಕ್ರವಾರ ತೆರೆಗೆ!


ಹೊಸಬರ ಪ್ರಯತ್ನಕ್ಕೆ ಪ್ರೇಕ್ಷಕರ ಆಶೀರ್ವಾದವಿರಲಿ"
-ಪ್ರತೀಕ್ ಶೆಟ್ಟಿ 

ಮಂಗಳೂರು: ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ "ನಿಮ್ಮೆಲ್ಲರ ಆಶೀರ್ವಾದ" ಸಿನಿಮಾ ಕುರಿತ ಪತ್ರಿಕಾಗೋಷ್ಠಿ ಬುಧವಾರ ಸಂಜೆ ನಗರದ ಬಿಜೈ ಭಟ್ಟಗುಡ್ಡ ಬಳಿಯ ಶರಾಬಿ ರೆಸ್ಟೋರೆಂಟ್ ನಲ್ಲಿ ಜರುಗಿತು.
ಈ ವೇಳೆ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತಾಡಿದ ನಾಯಕ ನಟ ಪ್ರತೀಕ್ ಶೆಟ್ಟಿ ಅವರು, "ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಂದೊಳ್ಳೆ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಎಂಜಾಯ್ ಮಾಡಿಕೊಂಡು ನಟಿಸಿದ್ದೇವೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ ಪ್ರಯತ್ನಗಳ ಮೂಲಕ ನಿಮ್ಮನ್ನು ರಂಜಿಸಲಿದ್ದೇವೆ" ಎಂದರು.

ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ನಟ ಅರವಿಂದ್ ಬೋಳಾರ್ ಅವರು, "ಬಹುತೇಕ ಸಿನಿಮಾಗಳಲ್ಲಿ ಕಲಾವಿದರಿಗೆ ಪೇಮೆಂಟ್ ಕೊಡುತ್ತಾರೆ ಆದರೆ ನಿರೀಕ್ಷೆಯಷ್ಟು ಗೌರವ ಸಿಗುವುದಿಲ್ಲ. ಆದರೆ ಈ ಸಿನಿಮಾದಲ್ಲಿ ಪ್ರತಿಯೊಬ್ಬ ಕಲಾವಿದರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಸರ್ವಧರ್ಮದ ಚಿತ್ರಪ್ರೇಮಿಗಳು ನಮ್ಮನ್ನು ಬೆಂಬಲಿಸಿ ಸಿನಿಮಾ ನೋಡಿ ಹರಸಬೇಕು. ಹೊಸಬರ ಹೊಸ ಪ್ರಯತ್ನ ಗೆಲ್ಲಬೇಕು" ಎಂದರು.

ಮೈಮ್ ರಾಮದಾಸ್ ಮಾತನಾಡಿ, "ಸಿಂಪಲ್ ಕಥೆಯನ್ನು ಬಹಳ ಸಿಂಪಲ್ ಆಗಿ ನಿರ್ದೇಶಕರು ಸಿನಿಮಾ ಮೂಲಕ ವಿವರಿಸಿದ್ದಾರೆ. ಎಲ್ಲೂ ಉತ್ಪ್ರೇಕ್ಷೆ ಇಲ್ಲದೇ ಸಹಜವಾಗಿ ಸಿನಿಮಾ ಮೂಡಿಬಂದಿದೆ. ಕರಾವಳಿ ಸೊಗಡಿನ ಕಂಪನ್ನು ಸಿನಿಮಾದಲ್ಲಿ ಕಾಣಬಹುದು. ಸಿನಿಮಾ ತಂಡವನ್ನು ಪ್ರೇಕ್ಷಕರು ಗೆಲ್ಲಿಸುವ ಮೂಲಕ ಮುಂದೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗುವಂತಾಗಬೇಕು" ಎಂದರು.


ವಾಲ್ಟರ್ ನಂದಳಿಕೆ ಮಾತು ಮುಂದುವರಿಸಿ, "ಈಗ ಹೆಚ್ಚಿನ ಕನ್ನಡ ಸಿನಿಮಾಗಳಲ್ಲಿ ನಮ್ಮ ಕರಾವಳಿ ಮೂಲದ ನಟರುಗಳೇ ಕಾಣಿಸುತ್ತಿರುವುದು ಸಂತಸದ ವಿಚಾರ. ತುಳುನಾಡಿನ ಜನರು ಯಾವತ್ತೂ ಒಳ್ಳೆಯ ಸಿನಿಮಾಗಳನ್ನು ಸೋಲಲು ಬಿಟ್ಟಿಲ್ಲ. ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ಥಿಯೇಟರ್ ಪ್ರೇಕ್ಷಕರಿಂದ ತುಂಬಲಿ" ಎಂದು ಶುಭ ಹಾರೈಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಉದಯ್ ಕುಮಾರ್ ಹೆಗ್ಡೆ, ವರುಣ್ ಹೆಗ್ಡೆ, ನಿರ್ದೇಶಕ ರವಿಕಿರಣ್, ವಾಲ್ಟರ್ ನಂದಳಿಕೆ, ನಟ ಪ್ರತೀಕ್ ಶೆಟ್ಟಿ, ಅರವಿಂದ್ ಬೋಳಾರ್, ಮೈಮ್ ರಾಮದಾಸ್, ಪುರುಷೋತ್ತಮ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಕರಾವಳಿ ಸೊಗಡಿನ ಕಥೆ!

ಸುಂದರ ಕರಾವಳಿಯ ಸೊಗಡಿನ ಒಳ್ಳೆಯ  ಜನರಿರುವ ಒಂದು ಸಣ್ಣ ಊರು, ಆ ಊರಿನ ಒಬ್ಬ ಪೊಲೀಸ್ ಅಧಿಕಾರಿ ಸಿನೆಮಾದ ನಾಯಕ 'ಆಶೀರ್ವಾದ್'. ಅವನು ಹಲವು ಏಳು ಬೀಳುಗಳನ್ನು ಕಂಡು ಹೇಗೆ ಪೋಲಿಸ್ ಆದ ಎನ್ನುವುದೇ ಸಿನಿಮಾದ ಕಥೆ. ಜೊತೆಗೆ ಪಾಯಲ್ ರಾಧಾಕೃಷ್ಣ ಹಾಗೂ ಆಶೀರ್ವಾದನ ನಡುವಿನ ಸುಂದರ ಪ್ರೇಮಕಥೆ ಇದರಲ್ಲಿದೆ.

ಹಿರಿಕಿರಿಯ ಕಲಾವಿದರ ಸಮಾಗಮ!

ಕನ್ನಡದ ಮೇರು ನಟಿ ಎಂ ಏನ್ ಲಕ್ಷ್ಮೀದೇವಿ, ಮೈಮ್ ರಾಮದಾಸ್, ಸ್ವಾತಿ ಗುರುದತ್ತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ, ಸದಾಶಿವ ಅಮೀನ್, ಖಳನಟನಾಗಿ ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ಮಿಂಚಿದ್ದಾರೆ.
ವರುಣ್ ಸಿನಿ ಕ್ರಿಯೇಷನ್ ಲಾಂಛನದಲ್ಲಿ ವರುಣ್ ಹೆಗ್ಡೆ ನಿರ್ಮಾಣದ ಹೊಣೆ ಹೊತ್ತಿದ್ದಾರೆ, ರವಿಕಿರಣ್ ಕತೆ- ನಿರ್ದೇಶನ, ಸರವಣನ್ ಜಿ ಏನ್ ಛಾಯಾಗ್ರಹಣ, ರಾಷ್ಟ್ರ ಪ್ರಶಸ್ತಿ ವಿಜೇತ ಸುರೇಶ್ ಆರುಮುಗಮ್ ಸಂಕಲನ, ಸುನಾದ್ ಗೌತಮ್ ಸಂಗೀತ , ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ ಚಿತ್ರದಲ್ಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸುಮಧುರ ಹಾಡುಗಳು ಎಲ್ಲರ ಮನಸೆಳೆದಿದೆ. ರಘು ದೀಕ್ಷಿತ್ ಹಾಡಿರುವ 'ರಕ್ಷಕ ' ಹಾಡಿನ ಮುಖಾಂತರ 'ನಿಮ್ಮೆಲ್ಲರ ಆಶೀರ್ವಾದ ' ಚಿತ್ರತಂಡ ಜನರಿಗಾಗಿ ಹಗಲಿರುಳು ದುಡಿಯುವ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ. ಹಾಡುಗಳಿಗೆ ರಜತ್ ಹೆಗ್ಡೆ, ನಿನಾದ ನಾಯಕ್, ನಿಹಾಲ್ ತಾವ್ರೋ ಧ್ವನಿ ನೀಡಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article