ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ: ಆಕಾಂಕ್ಷಿಗಳಿಗೆ ಹೊರಬಿತ್ತು ಸಿಹಿಸುದ್ದಿ!

ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ: ಆಕಾಂಕ್ಷಿಗಳಿಗೆ ಹೊರಬಿತ್ತು ಸಿಹಿಸುದ್ದಿ!






ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಸಚಿವರ ಈ ಹೇಳಿಕೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯಾಗಿ ಬಂದಿದೆ.



ಜುಲೈ ತಿಂಗಳಿನಲ್ಲಿ 200 ಯೂನಿಟ್‌ನ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ. ಯುವ ನಿಧಿ ಯೋಜನೆಯ ಜಾರಿಗೂ ತಯಾರಿ ನಡೆಸಲಾಗಿದೆ. ಈ ಯೋಜನೆ ಡಿಸೆಂಬರ್‌ನಲ್ಲಿ ಲೋಕಾರ್ಪಣೆಯಾಗಲಿದೆ.



ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಪ್ರಕಟಿಸಿದ್ದಾರೆ.



ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿಯಲ್ಲಿ ಕಲ್ಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.