ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ





ದೇಶದ ಪ್ರತಿಷ್ಠಿತ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4545 ಗುಮಾಸ್ತ (ಕ್ಲರ್ಕ್‌) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. 


ಕರ್ನಾಟಕದಲ್ಲಿ 253 ಹುದ್ದೆಗಳು ನೇಮಕಾತಿಗೆ ಒಳಪಡಲಿವೆ. ಆಯ್ಕೆಯು ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ಮೂಲಕ ನಡೆಯಲಿದೆ.



ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು...?

ಕೆನರಾ ಬ್ಯಾಂಕ್ 165

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 61

ಪಂಜಾಬ್ ನ್ಯಾಷನಲ್ ಬ್ಯಾಂಕ್ 15

ಪಂಜಾಬ್ ಆಂಡ್ ಸಿಂಡ್ ಬ್ಯಾಂಕ್ 9

ಬ್ಯಾಂಕ್ ಆಫ್ ಇಂಡಿಯಾ 03


ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುತ್ತದೆ. ಅರ್ಜಿ ಸಲ್ಲಿಸಲು ಜುಲೈ 21, 2023 ಕೊನೆಯ ದಿನಾಂಕವಾಗಿರುತ್ತದೆ.


ವಿದ್ಯಾರ್ಹತೆ: ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಪದವಿ ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು.


ಮುಖ್ಯ ಪರೀಕ್ಷೆ: ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರು ನಗರದಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆಗಳು: ಬೆಂಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಶಿವಮೊಗ್ಗ, ಮತ್ತು ಉಡುಪಿ