Kadaba:- ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ.ಎಚ್ಚರಿಕೆ ಸಂದೇಶ ನೀಡಿದ ಸ್ಥಳಿಯಾಡಳಿತ..

ಸುಬ್ರಹ್ಮಣ್ಯ

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರ್ತಿದ್ದೂ,ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಬಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ನದಿ ಬದಿಗೆ ಹೋಗದಂತೆ ಭಕ್ತರಿಗೆ ತಹಶಿಲ್ದಾರ್ ರಮೇಶ್ ಬಾಬು ಅವರು ಸೂಚನೆ ನೀಡಿದ್ದಾರೆ. ಸ್ಥಳದಲ್ಲಿ ಪೊಲೀಸರು, ಗೃಹರಕ್ಷಕ ದಳದಿಂದ ಕಾವಲು ಏರ್ಪಡಿಸಲಾಗಿದೆ. ಮಾತ್ರವಲ್ಲದೆ ಸ್ಥಳದಲ್ಲಿ ಗೃಹರಕ್ಷಕ, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಕುಮಾರಧಾರ ನದಿಯ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ. ಹೆದ್ದಾರಿ ಮೇಲೆ ನೀರು ಹರಿದು ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ.ಇನ್ನು ಕೋಡಿಂಬಾಳ ಸಮೀಪದ ಪುಳಿಕುಕ್ಕು, ಕೋರಿಯರ್ ಎಂಬಲ್ಲೂ ಕುಮಾರಧಾರಾ ನದಿಯ ನೆರೆನೀರು ರಸ್ತೆಗ  ಬಂದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.ಹಲವು ಕಡೆಗಳಲ್ಲಿ ಮರ ಬಿದ್ದು,ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.