-->
1000938341
ಕರಾವಳಿಯ ಪವಾಡದ ದೈವ ಕೊರಗಜ್ಜ‌ ಗುಡಿಗೆ ಬೆಂಕಿ ಹಚ್ಚಿದ!

ಕರಾವಳಿಯ ಪವಾಡದ ದೈವ ಕೊರಗಜ್ಜ‌ ಗುಡಿಗೆ ಬೆಂಕಿ ಹಚ್ಚಿದ!ಮಂಗಳೂರು:  ತುಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ದೈವ ಎಂಬ ನಂಬುಗೆ ಇದೆ. ಇಂತಹ ಪವಾಡವಿರುವ ಕೊರಗಜ್ಜನ ಗುಡಿಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಪ್ರಸಂಗ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ  ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ಈ ಘಟನೆ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಕೊರಗಜ್ಜನ  ಸನ್ನಿಧಿಗೇ ಬೆಂಕಿ ಇಡುವವರೆಗೆ ಹೋಗಿದೆ.

ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಇಲ್ಲಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಯೊಬ್ಬ ಆಕ್ಷೇಪ ವ್ಯಕ್ತಪಡಿಸಿದ್ದ. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದ. ಕಳೆದ ಕೆಲ ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟಿದ್ದಾನೆ

ಘಟನೆ ಖಂಡಿಸಿ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.

Ads on article

Advertise in articles 1

advertising articles 2

Advertise under the article