ಹೆದ್ದಾರಿ ಗುಂಡಿಯಿಂದ ಅಪಘಾತವಾಗಿ ಸಾವು- NHIA ಗೆ ನೋಟೀಸ್ ನೀಡಲು ಪೊಲೀಸರ ನಿರ್ಧಾರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ- ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಸಂಬಂಧ, ಈ ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಿಲ್ಲ ಎಂಬ ಕಾರಣಕ್ಕೆ NHIA ಗೆ ನೋಟಿಸ್ ನೀಡಲು ಮಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ಅಪಘಾತದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಸ್ಕೂಟ‌ರ್ ಸವಾರ, ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿದ್ದರು.

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆದರೆ, ರಸ್ತೆ ಗುಂಡಿಯಿಂದಾಗಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲೂ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ರ ಆಕ್ರೋಶ ಕೇಳಿಬಂದಿತ್ತು.

ಈ ಬಗ್ಗೆ ಮಂಗಳೂರು  ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ 'ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu