ಉಡುಪಿ: ಉಡುಪಿಯ ಕಾಲೇಜಿನ ವಾಷ್ ರೂಂ ನಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಖಂಡಿಸಿ ABVP ಜು.27ರಂದು ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆ ಯಲ್ಲಿ ಭಾಗಿಯಾಗಿ ವಿದ್ಯಾರ್ಥಿನಿಯೊಬ್ಬಳು ಹೇಳಿಕೆ ನೀಡಿದ್ದು, ಇದೇ ಕಾರಣಕ್ಕೆ ಜು.28ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಜಿಗರ್ ಕೋಬ್ರಾ ಎನ್ನುವ ಖಾತೆಯಿಂದ ವಿದ್ಯಾರ್ಥಿನಿಯನ್ನು ಫಾಲೋ ಮಾಡಿ ಕೆಟ್ಟ ಹಾಗೂ ಆಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದರಿಂದ ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ಉಂಟಾಗಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ನೊಂದ ವಿದ್ಯಾರ್ಥಿನಿ ನೀಡಿದ ದೂರಿನಂತೆ ಸೆನ್ ಅಪರಾಧ ಠಾಣೆಯಲ್ಲಿ ಕಲಂ: 67, ಐಟಿ ಆಕ್ಟ್ ಮತ್ತು 354 (ಡಿ) ಐಪಿಸಿಯಂತೆ ಪ್ರಕರಣ ದಾಖಲಾಗಿದೆ.